ನವಜೋತ್ ಸಿಂಗ್ 
ದೇಶ

ರಾಜ್ಯಸಭಾ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ಧು ರಾಜಿನಾಮೆ

ಭಾರತೀಯ ಜನತಾ ಪಕ್ಷದಿಂದ(ಬಿಜೆಪಿ) ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ಧು ತಮ್ಮ ಸ್ಥಾನಕ್ಕೆ...

ನವದೆಹಲಿ: ಭಾರತೀಯ ಜನತಾ ಪಕ್ಷದಿಂದ(ಬಿಜೆಪಿ) ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ಧು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ರಾಜ್ಯಸಭಾ ಸ್ಥಾನಕ್ಕೆ ನವಜೋತ್ ಸಿಂಗ್ ಸಿದ್ಧು ದಿಢೀರ್ ರಾಜಿನಾಮೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಆದರೆ ಯಾವ ನಿರ್ದಿಷ್ಟ ಕಾರಣಕ್ಕೆ ರಾಜಿನಾಮೆ ನೀಡಿದ್ದಾರೆ ಎಂಬುದು ತಿಳಿದುಬಂದಿಲ್ಲ.

ಈ ವರ್ಷದ ಕೊನೆ ಅಥವಾ 2017ರ ಆರಂಭದಲ್ಲಿ ಪಂಬಾಜ್ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಸಿದ್ಧು ರಾಜಿನಾಮೆ ನೀಡಿರುವುದು ನಾನಾ ಊಹಾಪೋಹಗಳಿಗೆ ನಾಂದಿಹಾಡಿದೆ.

ಪಂಜಾಬ್ ನ ಅಮೃತಸರದಿಂದ ಲೋಕಸಭೆಗೆ ಆರಿಸಿ ಬಂದಿದ್ದ ನವಜೋತ್ ಸಿಂಗ್ ಸಿದ್ಧು ಹಿರಿಯರ ಒತ್ತಡಕ್ಕೆ ಮಣಿದು ಆ ಸ್ಥಾನವನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಬಿಟ್ಟುಕೊಟ್ಟಿದ್ದರು. ಆದರೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಸಿದ್ಧು ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅವರು ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬಂದಿವೆ.

ಏಪ್ರಿಲ್ ನಲ್ಲಿ ಬಿಜೆಪಿ ರಾಜ್ಯಸಭೆಗೆ ನವಜೋತ್ ಸಿಂಗ್ ಸಿದ್ಧು ಅವರನ್ನು ನಾಮನಿರ್ದೇಶನ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT