ಸಿಆರ್ಪಿಎಫ್ 
ದೇಶ

ನಕ್ಸಲರ ಅಟ್ಟಹಾಸ: ನೆಲಬಾಂಬ್ ಸ್ಫೋಟದಲ್ಲಿ 10 ಸಿಆರ್ಪಿಎಫ್ ಕಮಾಂಡೋಗಳು ಹುತಾತ್ಮ

ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಪೋಟಗೊಂಡು 10 ಸಿಆರ್ಪಿಎಫ್ ಕಮಾಂಡೋಗಳು ಹುತಾತ್ಮರಾಗಿದ್ದು, 5 ಯೋಧರು ಗಾಯಗೊಂಡಿರುವ ಘಟನೆ ಬಿಹಾರದ...

ಪಾಟ್ನಾ: ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಪೋಟಗೊಂಡು 10 ಸಿಆರ್ಪಿಎಫ್ ಕಮಾಂಡೋಗಳು ಹುತಾತ್ಮರಾಗಿದ್ದು, 5 ಯೋಧರು ಗಾಯಗೊಂಡಿರುವ ಘಟನೆ ಬಿಹಾರದ ಗಯಾ ಮತ್ತು ಔರಂಗಾಬಾದ್ ಜಿಲ್ಲೆಯ ಗಡಿ ಭಾಗ ದುಮ್ರಿ ನಲ್ಲಾ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ನಲ್ಲಾ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಸಿಆರ್ಪಿಎಫ್ ಪಡೆ ಶೋಧ ಕಾರ್ಯ ನಡೆಸುತ್ತಿತ್ತು. ಈ ವೇಳೆ ನಕ್ಸಲರು 21 ಸುಧಾರಿತ ಸ್ಪೋಟಕಗಳನ್ನು ಸಿಡಿಸಿದ್ದಾರೆ. ಇದರಲ್ಲಿ 10 ಕಮಾಂಡೋಗಳು ಹುತಾತ್ಮರಾಗಿದ್ದಾರೆ. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ 4 ನಕ್ಸಲರು ಮೃತಪಟ್ಟಿದ್ದಾರೆ.

ಸೋಮವಾರ ಬೆಳಗ್ಗೆಯಿಂದ ನಕ್ಸಲರ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದ್ದು, ರಾತ್ರಿ ನಕ್ಸಲರು ಐಇಡಿ ಬಾಂಬ್ ಸ್ಫೋಟಿಸಿದ್ದಾರೆ. ಇನ್ನು ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲು ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT