ಸಾಮಾಜಿಕ ಜಾಲತಾಣ ಬಳಕೆಗೆ ಸರ್ಕಾರಿ ಅಧಿಕಾರಿಗಳಿಗೆ ಶೀಘ್ರವೇ ಅನುಮತಿ: ಆದರೆ ಸರ್ಕಾರವನ್ನು ಟೀಕಿಸುವಂತಿಲ್ಲ! 
ದೇಶ

ಸಾಮಾಜಿಕ ಜಾಲತಾಣ ಬಳಕೆಗೆ ಸರ್ಕಾರಿ ಅಧಿಕಾರಿಗಳಿಗೆ ಶೀಘ್ರವೇ ಅನುಮತಿ: ಆದರೆ ಸರ್ಕಾರವನ್ನು ಟೀಕಿಸುವಂತಿಲ್ಲ!

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಕ್ತ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಸಕ್ರಿಯರಾಗಲು ಸರ್ಕಾರಿ ಅಧಿಕಾರಿಗಳಿಗೆ ಶೀಘ್ರವೇ ಅನುಮತಿ ನೀಡಲಾಗುತ್ತದೆ.

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಕ್ತ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಸಕ್ರಿಯರಾಗಲು ಸರ್ಕಾರಿ ಅಧಿಕಾರಿಗಳಿಗೆ ಶೀಘ್ರವೇ ಅನುಮತಿ ನೀಡಲಾಗುತ್ತದೆ. ಆದರೆ ಸರ್ಕಾರದ ವಿರುದ್ಧ ಮಾತನಾಡಬಾರದೆಂಬ ಷರತ್ತನ್ನು ವಿಧಿಸಲಾಗಿದೆ.

ಈಗಿನ ನಿಯಮಗಳ ಪ್ರಕಾರ ಸರ್ಕಾರದಿಂದ ಅನುಮತಿ ಪಡೆದ ನಂತರ ಸರ್ಕಾರಿ ಅಧಿಕಾರಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ಇನ್ನಿತರ ರೀತಿಯಲ್ಲಿ ಸಾರ್ವಜನಿಕ ಹೇಳಿಕೆ ನೀಡುವುದಕ್ಕೆ ಅವಕಾಶವಿದೆ. ಆದರೆ ಕೇಂದ್ರ ಸರ್ಕಾರ ಅಖಿಲ ಭಾರತ ಸೇವಾ (ನಡತೆ) ನಿಯಮಗಳನ್ನು ಬದಲಾವಣೆ ಮಾಡಲು ಮುಂದಾಗಿದೆ. ತಿದ್ದುಪಡಿ ನಿಯಮಗಳು ಜಾರಿಯಾದಲ್ಲಿ  ಸಾಮಾಜಿಕ ಜಾಲತಾಣ, ಸಾರ್ವಜನಿಕ ಹೇಳಿಕೆ, ಪುಸ್ತಕ ಬಿಡುಗಡೆ, ಮಾಧ್ಯಮ ಸಂವಹನಗಳಲ್ಲಿ ಭಾಗವಹಿಸುವುದಕ್ಕೂ ಮುನ್ನ ಸರ್ಕಾರದಿಂದ ಅನುಮತಿ ಪಡೆಯುವ ಅವಶ್ಯಕತೆ ಇರುವುದಿಲ್ಲ. ಅಂತೆಯೇ ಸರ್ಕಾರದ ವಿರುದ್ಧವಾಗಿ ಅಥವಾ ಸರ್ಕಾರದ ಯೋಜನೆಗಳಿಗೆ ಮುಜುಗರ ಉಂಟು ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡುವಂತಿಲ್ಲ ಎಂಬ ನಿರ್ಬಂಧವನ್ನು ಪ್ರಸ್ತಾವಿತ ಕಾನೂನಿನಲ್ಲಿ ಸೇರಿಸಲಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳನ್ನು ಹಾಕುವುದರ ಮೂಲಕ ಸಂಕಷ್ಟಕ್ಕೀಡಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?