ಗಾಂಧಿ ಕುಟುಂಬ ಕ್ಷಮೆ ಕೋರಿದ ಇತಿಹಾಸವೇ ಇಲ್ಲ: ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ಹೊಸ ವಿವಾದ ಸೃಷ್ಟಿಸಲು ಬಿಜೆಪಿಗೆ ಅಸ್ತ್ರವೊಂದು ಸಿಕ್ಕಿದೆ...
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ಹೊಸ ವಿವಾದ ಸೃಷ್ಟಿಸಲು ಬಿಜೆಪಿಗೆ ಅಸ್ತ್ರವೊಂದು ಸಿಕ್ಕಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿ, ಗಾಂಧಿ ಕುಟುಂಬದವರು ಎಂದೂ ಕ್ಷಮೆ ಕೇಳಿಲ್ಲ. ಬೇಕಾದರೆ ಕೋರ್ಟ್ ನ ವಿಚಾರಣೆ ಎದುರಿಸುತ್ತಾರೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷಮೆ ಕೇಳಿ ಇಲ್ಲವೇ ವಿಚಾರಣೆ ಎದುರಿಸಿ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಆದೇಶ ನೀಡಿದ ಸಂಬಂಧ ದಿಗ್ವಿಜಯ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.
ಸುದ್ದಿ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿದ ಅವರು, ಗೋಡ್ಸೆ ವಿಚಾರದಲ್ಲಿ ರಾಹುಲ್ ಗಾಂಧಿಯವರು ಕ್ಷಮೆ ಕೇಳುವುದಿಲ್ಲ. ಬದಲಾಗಿ ವಿಚಾರಣೆ ಎದುರಿಸುತ್ತಾರೆ. ಗಾಂಧಿ ಕುಟುಂಬದವರು ಕ್ಷಮೆ ಕೇಳಿದ ಪ್ರಸಂಗ ಇತಿಹಾಸದಲ್ಲಿ ನಡೆದೇ ಇಲ್ಲ ಎಂದರು.
ಇನ್ನು ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಆರ್ ಎಸ್ಎಸ್, ರಾಹುಲ್ ಗಾಂಧಿಯವರು ಕ್ಷಮಾಪಣೆ ಕೋರದಿದ್ದರೆ ಆಗಾಗ ಸುಪ್ರೀಂ ಕೋರ್ಟ್ ಗೆ ಹೋಗುತ್ತಿರಬೇಕಾಗುತ್ತದೆ ಎಂದರು.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ರಾಹುಲ್ ಗಾಂಧಿಯವರು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.