ಸಚಿವ ವೆಂಕಯ್ಯ ನಾಯ್ಡು 
ದೇಶ

ಭಾರತದ ಏಕತೆ ಮುಖ್ಯವೇ ಹೊರತು ಉಗ್ರರ ಪ್ರಾಣವಲ್ಲ: ವೆಂಕಯ್ಯ ನಾಯ್ಡು

ದೇಶದ ಏಕತೆ ಮುಖ್ಯವೇ ಹೊರತು ಉಗ್ರರ ಪ್ರಾಣವಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ನವದೆಹಲಿ: ಕಾಶ್ಮೀರ ವಿಷಯದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಡೆಗೆ ಅಸಮಾಧಾನಗೊಂಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ದೇಶದ ಏಕತೆ ಮುಖ್ಯವೇ ಹೊರತು ಉಗ್ರರ ಪ್ರಾಣವಲ್ಲ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಭಾರತೀಯ ಜನತಾಪಕ್ಷ( ಬಿಜೆಪಿ) ದೇಶದ ಭದ್ರತೆಗೆ ಬದ್ಧವಾಗಿದೆ. ನಮ್ಮ ಪಕ್ಷಕ್ಕೆ ದೇಶದ ಸಮಗ್ರತೆಯೇ ಮುಖ್ಯವಾದದ್ದೇ ಹೊರತು ಉಗ್ರರ ಜೀವಗಳಲ್ಲ ಎಂದು ಕಾಶ್ಮೀರ ವಿಷಯ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಟಿವಿ ಚಾನಲ್ ಒಂದಕ್ಕೆ ಸಂದರ್ಶನ ನೀಡಿದ್ದ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಬೇಕಾದರೆ ವಿಧಿಸಿದ್ದ ಷರತ್ತುಗಳನ್ನು ಸರಿಯಾಗಿ ಗೌರವಿಸಲಾಗುತ್ತಿಲ್ಲ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ವೆಂಕಯ್ಯ ನಾಯ್ಡು, ಕಾಶ್ಮೀರ ವಿಷಯದಲ್ಲಿ ಕೀಳು ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ದೇಶದ ಭದ್ರತೆ ವಿಚಾರದಲ್ಲಿ ರಾಜಿಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.  ಕಾಶ್ಮೀರ ವಿಷಯದಲ್ಲಿ ಸಹಾನುಭೂತಿ ತೋರುತ್ತಿರುವವರು ಹಾಗೂ ಅಂಕಣಗಳನ್ನು ಬರೆಯುತ್ತಿರುವವರು ದೇಶದ ಜನತೆಯ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ