ಲಖನೌನಲ್ಲಿ ಬಿಎಸ್ ಪಿ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಬಿಜೆಪಿ ವಿರುದ್ಧ ಬಿಎಸ್ ಪಿ ಭಾರಿ ಪ್ರತಿಭಟನೆ

ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರ ವಿರುದ್ಧ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಲಖನೌ: ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರ ವಿರುದ್ಧ ಕಾರ್ಯಕರ್ತರು ವ್ಯಾಪಕ  ಪ್ರತಿಭಟನೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶ ರಾಜಧಾನಿ ಲಖನೌ ಸೇರಿದಂತೆ ರಾಜ್ಯದ್ಯಂತ ಲಕ್ಷಾಂತರ ಬಿಎಸ್ ಪಿ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಬಿಜೆಪಿ ಮುಖಂಡ ದಯಾಶಂಕರ  ಅವರನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ. ಲಖನೌನಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಹರಸಹಾಸ ಪಡುತ್ತಿದ್ದು, ಕೆಲವೆಡೆ ಪ್ರತಿಭಟನೆ  ಹಿಂಸಾಚಾರಕ್ಕೆ ತಿರುಗಿದೆ ಎಂದು ಹೇಳಲಾಗುತ್ತಿದೆ.

ಪ್ರತಿಭಟನಾಕಾರರ ನಿಯಂತ್ರಣಕ್ಕಾಗಿ ನೂರಾರು ಮಂದಿ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಸಾವಿರಾರು ಸಂಖ್ಯೆಯಲ್ಲಿರುವ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ  ಪಡುತ್ತಿದ್ದಾರೆ. ಇನ್ನು ಕೆಲವೆಡೆ ಲಾಠಿ ಪ್ರಹಾರ ನಡೆಸಲಾಗಿದ್ದು, ಮತ್ತೆ ಕೆಲವೆಡೆ ಪೊಲೀಸರ ಮೇಲೆಯೇ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಘಟನೆ ಕೂಡ ದಾಖಲಾಗಿದೆ. ಈ ನಡುವೆ  ದಯಾಶಂಕರ ಅವರ ಮನೆ ಮೇಲೆ ಬಿಎಸ್ ಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಕುರಿತು ಮಾಹಿತಿ ಪಡೆದ ಪೊಲೀಸರು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿರುವ ದಯಾಶಂಕರ ಅವರ  ಮನೆಗೆ ವ್ಯಾಪಕ ಭದ್ರತೆ ಒದಗಿಸಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲೂ ಬಿಜೆಪಿ ವಿರುದ್ಧ ಬಿಎಸ್ ಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ದಯಾಶಂಕರ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಆಗ್ರಹಿಸುತ್ತಿದ್ದಾರೆ.  ಈ ಬಗ್ಗೆ ಮಾತನಾಡಿರುವ ಬಿಎಸ್ ಪಿ ಸಂಸದ ಸತೀಶ್ ಮಿಶ್ರಾ ಅವರು, ಹೆಣ್ಣುಮಕ್ಕಳ ಕುರಿತು ಕೀಳುಮಟ್ಟದಲ್ಲಿ ಯೋಚನೆ ಮಾಡುವ ದಯಾಶಂಕರರಂತಹವರನ್ನು ಜೈಲಿಗಟ್ಟಬೇಕು ಎಂದು  ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಟಿಕೆಟ್ ಹಂಚಿಕೆಯಲ್ಲಿ ಬಿಎಸ್ ಪಿ ಭ್ರಷ್ಟಾಚಾರವೆಸಗಿದೆ ಎಂಬ ಆರೋಪದ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ವೇಳೆ ಆಘಾತಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ  ದಯಾಶಂಕರ್ ಸಿಂಗ್ ಮಾಯಾವತಿಯನ್ನು ವೈಶ್ಯಗಿಂತಲೂ ಕಡೆ ಎಂದು ಹೇಳಿದ್ದರು. ಅವರ ಈ ಹೇಳಿಕೆ ಉಭಯ ಸದನಗಳಲ್ಲಿ ವ್ಯಾಪಕ ಕೋಲಾಹಲಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ