ಸ್ಪೈಸ್ ಜೆಟ್ ವಿಮಾನ (ಸಾಂದರ್ಭಿಕ ಚಿತ್ರ) 
ದೇಶ

ಸ್ಪೈಸ್ ಜೆಟ್ ವಿಮಾನದಲ್ಲಿ ಶಂಕಾಸ್ಪದ ಬ್ಯಾಗ್ ಪತ್ತೆ: ಬಾಂಬ್ ಭೀತಿ

ಪಂಜಾಬ್ ನ ಅಮೃತಸರ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಭೀತಿ ಆವರಿಸಿದ್ದು, ನಿಲ್ದಾಣದಲ್ಲಿರುವ ಸ್ಪೈಸ್ ಜೆಟ್ ವಿಮಾನದಲ್ಲಿ ಶಂಕಾಸ್ಪದ ಬ್ಯಾಗ್ ವೊಂದು ಪತ್ತೆಯಾಗಿದೆ...

ಅಮೃತಸರ್: ಪಂಜಾಬ್ ನ ಅಮೃತಸರ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಭೀತಿ ಆವರಿಸಿದ್ದು, ನಿಲ್ದಾಣದಲ್ಲಿರುವ ಸ್ಪೈಸ್ ಜೆಟ್ ವಿಮಾನದಲ್ಲಿ ಶಂಕಾಸ್ಪದ ಬ್ಯಾಗ್ ವೊಂದು ಪತ್ತೆಯಾಗಿದೆ.

ಮೂಲಗಳ ಪ್ರಕಾರ ದುಬೈನಿಂದ ಅಮೃತ್ ಸರ್ ಗೆ ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನ ಸಂಖ್ಯೆ 56ರಲ್ಲಿ ಶಂಕಾಸ್ಪದ ಬ್ಯಾಗ್ ವೊಂದು ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಬಾಂಬ್ ಇರಬಹುದು ಎಂಬ  ಭೀತಿ ಆವರಿಸಿದೆ. ಹೀಗಾಗಿ ಅಮೃತಸರ್ ವಿಮಾನ ನಿಲ್ದಾಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಭದ್ರತಾ ಸಿಬ್ಬಂದಿಗಳು  ದೌಡಾಯಿಸಿದ್ದಾರೆ. ಪ್ರಸ್ತುತ ಬ್ಯಾಗ್ ಅನ್ನು ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲ ಪ್ರಯಾಣಿಕರು ಸುರಕ್ಷಿತ
ಇನ್ನು ವಿಮಾನದಲ್ಲಿ ಶಂಕಾಸ್ಪದ ಬ್ಯಾಗ್ ಪತ್ತೆಯಾದ ವಿಚಾರ ತಿಳಿಯುತ್ತಿದ್ದಂತೆಯೇ ವಿಮಾನದ ಸಿಬ್ಬಂದಿಗಳು ಭದ್ರತಾ ನಿಯಂತ್ರಣ ಕೊಠಡಿಗೆ ಸಮಾಚಾರ ತಿಳಿಸಿದ್ದು, ವಿಮಾನಕ್ಕೆ  ದೌಡಾಯಿಸಿದ ಭದ್ರತಾ ಅಧಿಕಾರಿಗಳು ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!