ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿರುವ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವಂತೆ ನಿರ್ದೇಶನ ನೀಡಲು ಮನವಿ ಮಾಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ರಾಜ್ಯದ ಜನತೆಯ ಭದ್ರತೆ ಹಾಗೂ ರಕ್ಷಣೆಯ ದೃಷ್ಟಿಯಿಂದ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಹೇರಲು ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿಪಡಿಸಿದೆ.
ಉಗ್ರ ಬುರ್ಹಾನ್ ಮುಜಾಫರ್ ವನಿಯ ಹತ್ಯೆಯನ್ನು ಖಂಡಿಸಿ, ಕಾಶ್ಮೀರದಲ್ಲಿ ಉಂಟಾಗಿರುವ ಗಲಭೆಯ ಹಿನ್ನೆಲೆಯಲ್ಲಿ ಶಿವಸೇನೆ, ಎನ್ ಪಿಪಿ ಹಾಗೂ ಜೆಕೆಎನ್ ಪಿಪಿ ಪಕ್ಷಗಳೂ ಸಹ ರಾಜ್ಯಪಾಲರ ಆಡಳಿತಕ್ಕೆ ಕರೆ ನೀಡಿದ್ದವು. ಇನ್ನು ಉಗ್ರನ ಹತ್ಯೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯನ್ನು ಮೃತಪಟ್ಟವರ ಸಂಖ್ಯೆ 44 ಕ್ಕೆ ಏರಿಕೆಯಾಗಿದ್ದು 10 ಜಿಲ್ಲೆಗಳಲ್ಲೂ ಕರ್ಫ್ಯೂ ಮುಂದುವರೆದಿದೆ.