ಮುಂಬೈ: ಮಹಾರಾಷ್ಟ್ರದಲ್ಲಿ ಕೇರಳ ಪೊಲೀಸರು ಹಾಗೂ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳ ಪಡೆ ಥಾಣೆಯಲ್ಲಿ ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ ನ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.
ಒಂದು ತಿಂಗಳ ಅವಧಿಯಲ್ಲಿ ನಡೆಯುತ್ತಿರುವ ಎರಡನೇ ಪ್ರಕರಣ ಇದಾಗಿದ್ದು, ಇದಕ್ಕೂ ಮುನ್ನ 31 ವರ್ಷದ ವ್ಯಕ್ತಿಯೋರ್ವನನ್ನು ಇಸೀಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಬಂಧಿತ ವ್ಯಕ್ತಿ ಫಾರೂಕ್ ಎಂಬ ಮತ್ತೋರ್ವ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದ.
ಜು.29 ರಂದು ಇಸೀಸ್ ಉಗ್ರ ಸಂಘಟನೆಯ ಬೆಂಬಲಿಗರ ಮೇಲೆ ದಾಳಿ ನಡೆಸಿದ್ದ ಎನ್ಐಎ, ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 11 ಜನ ಶಂಕಿತ ಉಗ್ರರನ್ನು ಬಂಧಿಸಿತ್ತು. ಈಗ ಇಂಥದ್ದೇ ಮತ್ತೊಂದು ಪ್ರಕರಣ ಮಹಾರಾಷ್ಟ್ರದಲ್ಲಿ ನಡೆದಿದೆ.