ಐಎಎಫ್ ವಿಮಾನಕ್ಕಾಗಿ ಮುಂದುವರೆದ ಶೋಧ ಕಾರ್ಯ (ಸಂಗ್ರಹ ಚಿತ್ರ) 
ದೇಶ

ಐಎಎಫ್ ವಿಮಾನಕ್ಕಾಗಿ ಮುಂದುವರೆದ ಶೋಧ ಕಾರ್ಯ: ಪರಿಕ್ಕರ್ ವೈಮಾನಿಕ ಸಮೀಕ್ಷೆ

ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ಎಎನ್-32 ವಿಮಾನದ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ಎಎನ್-32 ವಿಮಾನದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದಲ್ಲಿ ಎ ಪಿ8I, ಒಂದು ಸಿಜಿಡಿಒ ಹಾಗೂ ಒಂದು ಸಿ 130 ಯನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಚೆನ್ನೈಗೆ ಆಗಮಿಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಚೆನ್ನೈ ಗೆ ಆಗಮಿಸುತ್ತಿದ್ದಂತೆಯೇ ತಾಂಬರಂ ಗೆ ವಿಮಾನದಲ್ಲಿ ಪ್ರಯಾಣಿಸಿದ ಮನೋಹರ್ ಪರಿಕ್ಕರ್, ಶೋಧ ಕಾರ್ಯಾಚರಣೆ ನಡೆಸಿದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಜು.22 ರಂದು ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ವಿಮಾನ ಚೆನ್ನೈ ನಿಂದ ಪೂರ್ವಕ್ಕೆ 280 ಕಿಮಿ ದೂರ ಇರಬೇಕಾದರೆ ರೇಡಾರ್ ಸಂಪರ್ಕ ಕಡಿದುಕೊಂಡಿತ್ತು. ಸುಮಾರು ನೌಕಾ ಪಡೆಯ 12 , ಕರಾವಳಿ ಕಾವಲು ಪಡೆಯ  ಹಡಗುಗಳು ಶುಕ್ರವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿವೆ. ಶನಿವಾರವೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು  ಶೋಧ ಕಾರ್ಯಾಚರಣೆಯಲ್ಲಿ ಜಲಾಂತರ್ಗಾಮಿ ನೌಕೆಯನ್ನೂ ಬಳಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT