ಸತೀಶ್ ಉಪಾಧ್ಯಾಯ 
ದೇಶ

ಆಮ್ ಆದ್ಮಿ ಪಕ್ಷ ಮಹಿಳಾ ವಿರೋಧಿ ಚಾರಿತ್ರ್ಯ ಹೊಂದಿದೆ: ಬಿಜೆಪಿ

ಮಹಿಳಾ ವಿರೋಧಿ ಚಾರಿತ್ರ್ಯ ಹೊಂದಿರುವ ಆಮ್ ಆದ್ಮಿ ಪಕ್ಷದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ, ಮಹಿಳೆಯರನ್ನು ಗೌರವಿಸದ ಜನರೇ ತುಂಬಿದ್ದಾರೆ

ನವದೆಹಲಿ: ಆಮ್ ಆದ್ಮಿ ಪಕ್ಷ ಮಹಿಳಾ ವಿರೋಧಿ ಚಾರಿತ್ರ್ಯ ಹೊಂದಿದೆ ಎಂದು ಬಿಜೆಪಿ ಆರೋಪಿಸಿದೆ. ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದಡಿ ದೆಹಲಿಯ ಒಖ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಆಪ್ ಶಾಸಕ ಅಮಾನತುಲ್ಲಾಹ್ ಖಾನ್ ಬಂಧನದ ಬೆನ್ನಲ್ಲೇ ಬಿಜೆಪಿ ಈ ಹೇಳಿಕೆ ನೀಡಿದೆ.

ಮಹಿಳಾ ವಿರೋಧಿ ಚಾರಿತ್ರ್ಯ ಹೊಂದಿರುವ ಆಮ್ ಆದ್ಮಿ ಪಕ್ಷದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ, ಮಹಿಳೆಯರನ್ನು ಗೌರವಿಸದ ಜನರೇ ತುಂಬಿದ್ದಾರೆ ಎಂದು ದೆಹಲಿ ಬಿಜೆಪಿ ಘಟಕದ ಮುಖ್ಯಸ್ಥ ಸತೀಶ್ ಉಪಾಧ್ಯಾಯ ಆರೋಪಿಸಿದ್ದಾರೆ.  ಮಹಿಳೆಯರಿಗೆ ಬೆದರಿಕೆ ಹಾಕಿದ ಆಪ್ ಶಾಸಕನನ್ನು ಬಂಧಿಸಿದರೆ ಪ್ರಧಾನಿ ಮೋದಿ ಅವರ ಪೊಲೀಸರು ನಮ್ಮ ಪಕ್ಷದ ಶಾಸಕರನ್ನು ಬಂಧಿಸುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡುತ್ತಾರೆ ಎಂದು ಸತೀಶ್ ಉಪಾಧ್ಯಾಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕರ್ತವ್ಯವನ್ನು ಪೊಲೀಸರು ಬಿಟ್ಟುಬಿಡಬೇಕೆ? ಎಂದು ಉಪಾಧ್ಯಾಯ ಕೇಜ್ರಿವಾಲ್ ನ್ನು ಪ್ರಶ್ನಿಸಿದ್ದಾರೆ. ಅಮಾನತುಲ್ಲಾಹ್ ಖಾನ್ ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲದ ಕಾರಣ, ಮಹಿಳೆಯೊಬ್ಬರು ಈ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ಚರ್ಚಿಸಲು ಶಾಸಕನ ನಿವಾಸಕ್ಕೆ ಭೇಟಿ ನೀಡಿದ ವೇಳೆ ಶಾಸಕ ಹಾಗೂ ಆತನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ಅಮಾನತುಲ್ಲಾಹ್ ಖಾನ್ ವಿರುದ್ಧ ದೂರು ನೀಡಿದ್ದರು.

ಆಮ್ ಆದ್ಮಿ ಪಕ್ಷದ ಆಡಳಿತದ ದೆಹಲಿಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಆಮ್ ಆದ್ಮಿ ಪಕ್ಷದ ಶಾಸಕರ ಪತ್ನಿಯರಿಗೂ ಭದ್ರತೆ ಇಲ್ಲ, ಇದು ಮನೋಜ್ ಕುಮಾರ್, ಸೋಮನಾಥ್ ಭಾರ್ತಿ ಪ್ರಕರಣಗಳಲ್ಲಿ ಸಾಬೀತಾಗಿದೆ ಎಂದು ಸತೀಶ್ ಉಪಾಧ್ಯಾಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!