ಕಾನ್ಪುರ: ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಪ್ರಧಾನಿ ನರೇಂದ್ರ ಮೋದಿ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಭಾರತ ಈಗ ಸುರಕ್ಷಿತವಾದ ಕೈಗಳಲ್ಲಿದೆ ಎಂದಿದ್ದಾರೆ.
ಇತ್ತೀಚೆಗಷ್ಟೇ ನಡೆದ ಕಾನ್ಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್ ಭಾಗವತ್ ಅವರು, ಸರ್ಕಾರದ ಆಯಕಟ್ಟಿನ ಸ್ಥಾನಗಳಲ್ಲಿ ಸ್ವಯಂ ಸೇವಕರಿದ್ದು, ಅವರ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ ಹೊಂದಿದ್ದು ಅದರ ಫಲವನ್ನು ಪಡೆಯಲು ಸ್ವಲ್ಪ ಸಮಯ ಕಾಯಬೇಕಾಗುತ್ತದೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಸಭೆಯಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರೊಂದಿಗೆ ನರೇಂದ್ರ ಮೋದಿ ಕಾರ್ಯವೈಖರಿಯನ್ನೂ ಶ್ಲಾಘಿಸಿದ್ದಾರೆ.