ವಿಜಯ್ ಮಲ್ಯ 
ದೇಶ

ಆಸ್ತಿ ವಿವರ ಬಹಿರಂಗಪಡಿಸದ ವಿಜಯ್ ಮಲ್ಯಗೆ ಸುಪ್ರೀಂ ನೋಟಿಸ್

ದೇಶ ಮತ್ತು ವಿದೇಶಗಳಲ್ಲಿರುವ ಆಸ್ತಿ ವಿವರವನ್ನು ಬಹಿರಂಗಪಡಿಸದ ಸಾಲದ ದೊರೆ, ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೋಮವಾರ....

ನವದೆಹಲಿ: ದೇಶ ಮತ್ತು ವಿದೇಶಗಳಲ್ಲಿರುವ ಆಸ್ತಿ ವಿವರವನ್ನು ಬಹಿರಂಗಪಡಿಸದ ಸಾಲದ ದೊರೆ, ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮಲ್ಯ ಹಾಗೂ ಅವರ ಕುಟುಂಬದ ಸದಸ್ಯರ ಮಾಲೀಕತ್ವದಲ್ಲಿ ಭಾರತ ಹಾಗೂ ವಿದೇಶಗಳಲ್ಲಿ ಹೊಂದಿರುವ ಆಸ್ತಿ ವಿವರವನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಆದರೆ, ಮಲ್ಯ ಈ ಆದೇಶ ಪಾಲಿಸಿಲ್ಲ ಎಂದು ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟ ಮತ್ತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದವು.
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಸಂಬಂಧ ಮದ್ಯದ ದೊರೆ ನೋಟಿಸ್ ನೀಡಿ, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.
ವಿಜಯ್ ಮಲ್ಯ ಅವರು ಬ್ರಿಟಿಷ್ ಸಂಸ್ಥೆಯೊಂದು ನೀಡಿದ 45 ಬಿಲಿಯನ್ ಯುಎಸ್ ಡಿ ಸೇರಿದಂತೆ ಇತರೆ ಯಾವುದೇ ಆಸ್ತಿಯ ಬಗ್ಗೆ ಸಂಪೂರ್ಣ ವಿವರ ನೀಡಿಲ್ಲ ಎಂದು ಅಟರ್ನಿ ಜನರಲ್ ಮಕುಲ್ ರೊಹಟ್ಗಿ ಅವರು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದರು.
'ಈ ವ್ಯಕ್ತಿ (ಮಲ್ಯ) ಕೋರ್ಟ್ ಆದೇಶವನ್ನು ಸಹ ಪಾಲಿಸುತ್ತಿಲ್ಲ ಮತ್ತು ತನ್ನ ಆಸ್ತಿಯ ವಿವರವನ್ನು ಬಹಿರಂಗಪಡಿಸುತ್ತಿಲ್ಲ. ಅಲ್ಲದೆ ಬ್ರಿಟಿಷ್ ಮೂಲದ ಡಿಯಾಜಿಯೊದಿಂದ ಪಡೆದ 45 ಮಿಲಿಯನ್ ಯುಎಸ್ ಡಿ ಬಗ್ಗೆಯೂ ಯಾವುದೇ ಮಾಹಿತಿ ನೀಡುತ್ತಿಲ್ಲ' ಎಂದು ಅಟರ್ನಿ ಜನರಲ್ ವಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ