ನಿಯಂತ್ರಣ ತಪ್ಪಿ ಕಾರು ಪಲ್ಟಿ: ಐವರು ಎಂಜಿನೀಯರಿಂಗ್ ವಿದ್ಯಾರ್ಥಿಗಳ ಸಾವು
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ ಪಟ್ಟಿರುವ ದಾರುಣ ಘಟನೆ ಪುಣೆ-ಮುಂಬೈ ಎಕ್ಸ್...
ಪುಣೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ ಪಟ್ಟಿರುವ ದಾರುಣ ಘಟನೆ ಪುಣೆ-ಮುಂಬೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದೆ.
ಪುಣೆಯ ಕಾಂಶೆಟ್ ಸುರಂಗ ಬಳಿ ನಡೆದ ಈ ದುರ್ಘಟನೆಯಲ್ಲಿ ಮೂವರು ಕಾರಿನಲ್ಲಿಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಕಾರು ಕ್ರಾಸಿಂಗ್ ನಲ್ಲಿ ಟರ್ನ್ ಮಾಡುವಾಗ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಮೋಟಾರು ಬೈಕ್ ಸವಾರನೊಬ್ಬ ತಿಳಿಸಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತೊಬ್ಬನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆದಿತ್ಯ ಭಂಡಾರ್ಕರ್, ಯಶ್ ಶಿರಾಲಿ, ಅಭಿಷೇಕ್ ಗೋಯೆಲ್, ಅಕ್ಷಯ್ ಬಿಲಾರೆ ಮತ್ತು ಜಾಕಿ ಸಾಮ್ಯುಯೆಲ್ ಮೃತ ಪಟ್ಟವರು ಎಂದು ತಿಳಿದು ಬಂದಿದೆ.