ನವದೆಹಲಿ: ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಮಂಗಳೂರು ಜಾಮೀನು ಮಂಜೂರು ಮಾಡಿದೆ.
ರಾಜೇಂದ್ರ ಕುಮಾರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿ ಐಎಎಸ್ ಅಧಿಕಾರಿಗೆ 1 ಲಕ್ಷ ರುಪಾಯಿ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಅಲ್ಲದೆ ದೆಹಲಿ ಬಿಟ್ಟು ಹೋಗದಂತೆ ಮತ್ತು ಸಾಕ್ಷ್ಯ ನಾಶಪಡಿಸಿದಂತೆ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೂಚಿಸಿದ್ದಾರೆ.
50 ಕೋಟಿ ರುಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೇಂದ್ರ ಮತ್ತು ಖಾಸಗಿ ಕಂಪೆನಿಯೊಂದರ ಇತರರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
1989ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ರಾಜೇಂದ್ರ ಕುಮಾರ್ ಅವರು ಟೆಂಡರ್ ಕರೆಯದೆ ಖಾಸಗಿ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಿ 50 ಕೋಟಿ ರುಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.