ದಯಾಶಂಕರ್ ಸಿಂಗ್ 
ದೇಶ

ಮಾಯಾವತಿ ವಿರುದ್ಧ ಹೇಳಿಕೆ: ಬಂಧನಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದಯಾಶಂಕರ್

ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಉಚ್ಚಾಟಿತ ನಾಯಕ...

ಲಖನೌ: ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್ ಅವರು ತಮ್ಮ ವಿರುದ್ಧ ಸ್ಥಳೀಯ ಕೋರ್ಟ್ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಗೆ ತಡೆ ಕೋರಿ ಅಲಹಬಾದ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬಂಧನ ವಾರಂಟ್ ಗೆ ತಡೆ ಕೋರಿ ದಯಾಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಸ್ವೀಕರಿಸಿದ್ದು, ಜುಲೈ 28ಕ್ಕೆ ವಿಚಾರಣೆ ನಿಗದಿಪಡಿಸಿದೆ.
ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ದಯಾಶಂಕರ್ ಅವರ ವಿರುದ್ಧ ಸೋಮವಾರ ಲಖನೌನ ಮುಖ್ಯ ನ್ಯಾಯಿಕ ದಂಡಾಧಿಕಾರಿ(ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್) ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದರು.
ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ್ದ ದಯಾಶಂಕರ್ ಅವರು, ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದು ಹೇಳಿದ್ದರು. ಈ ಸಂಬಂಧ ಬಿಜೆಪಿ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿತ್ತು. ಅಲ್ಲದೆ ಬಿಎಸ್ಪಿ ಅವರ ವಿರುದ್ಧ ಎಫ್ಐಆರ್ ಸಹ ದಾಖಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!