ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಪ್ರದರ್ಶನವನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ದೇಶಭಕ್ತಿಯನ್ನು ಉತ್ತೇಜಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತ ಪರ್ವ ಎಂಬ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದೆ.
ಆಗಸ್ಟ್ 12 ರಿಂದ 6 ದಿನಗಳ ಕಾಲ ಭಾರತ ಪರ್ವ ಕಾರ್ಯಕ್ರಮ ನಡೆಯಲಿದ್ದು, ಈ ಹಿಂದಿನಂತೆ ಕಳೆದ ಎರಡು ವರ್ಷಗಳ ಸ್ವಾತಂತ್ರ್ಯ ದಿನದ ಆಚರಣೆಗಿಂತಲೂ ಭಿನ್ನವಾಗಿರಲಿದ್ದು, ಎಲ್ಲಾ ರಾಜ್ಯಗಳಿಂದ ಸ್ಥಳೀಯ ಕಲಾವಿದರು ಭಾರತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ವಿಶೇಷವಾಗಿರಲಿದೆ.
ದೆಹಲಿಯ ರಾಜ್ ಪಥ್ ನಲ್ಲಿ ಭಾರತ್ ಪರ್ವ ಕಾರ್ಯಕ್ರಮ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಸಹ ಭಾಗವಹಿಸುವ ನಿರೀಕ್ಷೆ ಇದೆ. ವಿವಿಧ ರಾಜ್ಯಗಳ ಪಾಕಪದ್ಧತಿ ಮತ್ತು ಕರಕುಶಲ ವಸ್ತುಗಳನ್ನು ಪ್ರದರ್ಶಿಸಲು 100 ಮಳಿಗೆಗಳನ್ನು ಪ್ರಾರಂಭಿಸಲಾಗುತ್ತದೆ. ಆಗಸ್ಟ್ 12 ರ ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿರುವ ಭಾರತ ಪರ್ವ ಕಾರ್ಯಕ್ರಮ ಆಗಸ್ಟ್ 18 ರ ವರೆಗೆ ನಡೆಯಲಿದೆ.