ನವದೆಹಲಿ: ಸರ್ಕಾರವನ್ನು ಟೀಕಿಸುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ರಾಜಕೀಯ ಅಸ್ತ್ರವಾಗಿ ಬಳಸಬಾರದು ಎಂದು ಗುರುವಾರ ಸುಪ್ರೀಂ ಕೋರ್ಟ್ ಹೇಳಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಮತ್ತು ಅವರ ಪತ್ನಿ ಪ್ರೇಮಲತಾ ಅವರ ವಿರುದ್ಧ ಹೊರಡಿಸಿದ್ದ ಜಾಮೀನು ರಹಿತ ಬಂಧನ ವಾರಂಟ್ ಗೆ ತಡೆ ನೀಡಿದ ನ್ಯಾಯಮೂರ್ತಿ ದೀಪಕ್ ಮಿಸ್ರ ಹಾಗೂ ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ಅವರನ್ನೊಳಗೊಂಡ ಸುಪ್ರೀಂ ಪೀಠ, ಭ್ರಷ್ಟ ಸರ್ಕಾರ ಅಥವಾ ಅಸಮರ್ಥ ಸರ್ಕಾರ ಎನ್ನುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಸರ್ಕಾರ ಟೀಕೆಗಳನ್ನು ಸಹಿಸಿಕೊಳ್ಳಬೇಕು. ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಬಾರದು ಎಂದಿರುವ ಕೋರ್ಟ್, ಸರ್ಕಾರವನ್ನು ಅಥವಾ ಅಧಿಕಾರಿಗಳನ್ನು ಟೀಕಿಸುವುದು ಭಯ ಹುಟ್ಟಿಸುವ ಪ್ರಕರಣ ಅಷ್ಟೆ ಎಂದು ಅಭಿಪ್ರಾಯ ಪಟ್ಟಿದೆ.
ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಪರವಾಗಿ ಸರ್ಕಾರಿ ಅಭಿಯೋಜಕರು ಸರ್ಕಾರವನ್ನು ಟೀಕಿಸಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಪ್ರಕರಣಗಳ ಪಟ್ಟಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ ಮಾನನಷ್ಟ ಪ್ರಕರಣ ದುರ್ಬಳಕೆ ಮಾಡಿಕೊಳ್ಳದಂತೆ ತಮಿಳುನಾಡು ಪರ ವಕೀಲರಿಗೆ ಕೋರ್ಟ್ ಎಚ್ಚರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics