ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ ವಿಮಾನ ನಿಲ್ದಾಣದಲ್ಲಿ 500 ನಕ್ಷತ್ರ ಆಮೆಗಳ ವಶ

ತಮಿಳುನಾಡಿನಿಂದ ಮಲೇಶಿಯಾಗೆ ಕದ್ದು ಸಾಗಣೆ ಮಾಡುತ್ತಿದ್ದ ಸುಮಾರು 500 ನಕ್ಷತ್ರ ಆಮೆಗಳನ್ನು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳು ಚೆನ್ನೈ ವಿಮಾನ ..

ಚೆನ್ನೈ: ತಮಿಳುನಾಡಿನಿಂದ ಮಲೇಶಿಯಾಗೆ ಕದ್ದು ಸಾಗಣೆ ಮಾಡುತ್ತಿದ್ದ ಸುಮಾರು 500 ನಕ್ಷತ್ರ ಆಮೆಗಳನ್ನು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಈ ನಕ್ಷತ್ರ ಆಮೆ ಮರಿಗಳಿಗೆ ಪ್ರಪಂಚಾದ್ಯಂತ ವಿಶಿಷ್ಟ ಬೇಡಿಕೆಯಿದೆ. ಔಷಧಿಗೆ ಹಾಗೂ ಮನೆಯಲ್ಲಿ ಸಾಕುವ ಉದ್ದೇಶದಿಂದ ಈ ಆಮೆಗಳನ್ನು ಕದ್ದು ಸಾಗಿಸಲಾಗುತ್ತದೆ.

ಥರ್ಮಕೋಲ್ ಬಾಕ್ಸ್ ನಲ್ಲಿ ಆಮೆಗಳನ್ನು ಸಾಗಿಸಲಾಗುತ್ತಿತ್ತು. ಅನುಮಾನ ಗೊಂಡ ದಿ ಥಾಯ್ ಏರ್ ವೇಸ್ ಅಧಿಕಾರಿಗಳು ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಬಂದು ಬಾಕ್ಸ್ ತೆರೆದಾಗ ಅದರಲ್ಲಿ 500 ಆಮೆಗಳು ಪತ್ತೆಯಾಗಿವೆ.

ಇವು ನಕ್ಷತ್ರ ಆಮೆಗಳಾಗಿದ್ದು, ಇವುಗಳ ರಪ್ತನ್ನು ನಿಷೇಧಿಸಲಾಗಿದೆ ಎಂದು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇವುಗಳ ಮೌಲ್ಯ ಸುಮಾರು 50 ಲಕ್ಷ ರೂಪಾಯಿ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT