ದಯಾಶಂಕರ್ ಸಿಂಗ್ 
ದೇಶ

ಮಾಯಾ ವಿರುದ್ಧ ಅವಹೇಳನಕಾರಿ ಹೇಳಿಕೆ; ದಯಾಶಂಕರ್ ಸಿಂಗ್ ಬಂಧನ

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್...

ಲಖನೌ: ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್ ಅವರನ್ನು ಉತ್ತರ ಪ್ರದೇಶ ಮತ್ತು ಬಿಹಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಿಹಾರದ ಬಕ್ಸಾರ್​ನಲ್ಲಿ ಶುಕ್ರವಾರ ಬಂಧಿಸಿದ್ದಾರೆ.
ಮಾಯಾವತಿ ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದಿದ್ದ ದಯಾಶಂಕರ್ ಸಿಂಗ್ ವಿರುದ್ಧ ಎಸ್ ಸಿ/ಎಸ್ ಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ದಯಾಶಂಕರ್ ಸಿಂಗ್ ಅವರನ್ನು ಇಂದು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾಯಾವತಿ ಅವರು ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದು, ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದು ಟೀಕಿಸಿದ್ದರು. ಇದಕ್ಕೆ ಸ್ವಪಕ್ಷ ಬಿಜೆಪಿ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಬಿಜೆಪಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
ಬಿಎಸ್​ಪಿ ಕಾರ್ಯಕರ್ತರು ದಲಿತ ಮಹಿಳೆಗೆ ಅವಮಾನ ಮಾಡಿದ್ದಾರೆಂದು ಎಫ್​ಐಆರ್ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ದಯಾಶಂಕರ್ ಕುಟುಂಬ ಸದಸ್ಯರು ಮಾಯಾವತಿ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!