ನವದೆಹಲಿ: ಅಸ್ಸಾಂ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪ್ರವಾಹ ಸಂತ್ರಸ್ತರಿಗೆ 4 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರಾಜನಾಥ್ ಸಿಂಗ್, ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರದಿಂದ ಅಸ್ಸಾಂಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ರಾಜನಾಥ್ ಸಿಂಗ್ ಘೋಷಿಸಿದ್ದಾರೆ.
ಅಸ್ಸಾಂ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ, ಪರಿಸ್ಥಿತಿ ಗಂಭೀರವಾಗಿದ್ದು ಸಂತ್ರಸ್ತ ಜನರಿಗೆ ಅತ್ಯುತ್ತಮ ರೀತಿಯಲ್ಲಿ ನೆರವು ನೀಡುವಂತೆ ಅಸ್ಸಾಂ ಸಿಎಂ ಸರ್ಬಾನಂದ ಸೋನೋವಾಲ್ ಗೆ ತಿಳಿಸಿರುವುದಾಗಿ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಅಸ್ಸಾಂ ನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ 36 ಲಕ್ಷ ಜನರು ಸಂತ್ರಸ್ತರಾಗಿದ್ದು 26 ಜನರು ಸಾವನ್ನಪ್ಪಿದ್ದಾರೆ.