ನವದೆಹಲಿ: ಅಸ್ಸಾಂನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜು.30ರಂದು ಅಸ್ಸಾಂ ಗೆ ಭೇಟಿ ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಅವಲೋಕಿಸಲು ದೆಹಲಿಯಿಂದ ಅಸ್ಸಾಂ ಗೆ ತೆರಳುತ್ತಿದ್ದೇನೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ರಾಜ್ಯದ 21 ಜಿಲ್ಲೆಗಳಲ್ಲಿ ಪ್ರವಹ ಉಂಟಾಗಿದ್ದು 20ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರೆ, 17 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.
ಅಸ್ಸಾಂ ಗೆ ಭೇಟಿ ನೀಡಿರುವ ರಾಜನಾಥ್ ಸಿಂಗ್, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ನಿರಾಶ್ರಿತರಿಗೆ ತೆರೆಯಲಾಗಿರುವ ನಿರಾಶ್ರಿತ ಕ್ಯಾಂಪ್ ಗಳಿಗೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತನಾಡಲಿದ್ದಾರೆ. ನಂತರ ಸಿಎಂ ಸರ್ಬಾನಂದ ಸೋನೊವಾಲ್ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ದೆಹಲಿಗೆ ವಾಪಸ್ಸಾಗಲಿದ್ದಾರೆ.