ಹರಕ್ ಸಿಂಗ್ ರಾವತ್ 
ದೇಶ

ಬಿಜೆಪಿ ಶಾಸಕ ಹರಕ್ ಸಿಂಗ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಉತ್ತರಾಖಂಡ್ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಹರಕ್ ಸಿಂಗ್ ರಾವತ್ ಅವರು ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ....

ನವದೆಹಲಿ: ಉತ್ತರಾಖಂಡ್ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಹರಕ್ ಸಿಂಗ್ ರಾವತ್ ಅವರು ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದ್ದು, ಬಿಜೆಪಿಗೆ ತೀವ್ರ ಮುಜುಗರದ ಪರಿಸ್ಥಿತಿ ಎದುರಾಗಿದೆ.
ವರದಿಗಳ ಪ್ರಕಾರ, 32 ವರ್ಷದ ಮಹಿಳೆಯೊಬ್ಬರು ಬಿಜೆಪಿ ಮುಖಂಡನ ವಿರುದ್ಧ ಸಫ್ದರ್ ಜಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎರಡು ವರ್ಷಗಳ ಹಿಂದೆ ರಾವತ್ ತನಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ. 
ಅಸ್ಸಾಂ ಮೂಲದ ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಬಿಜೆಪಿ ನಾಯಕನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ 2014ರಲ್ಲೇ ಮೀರತ್ ಮೂಲದ ಮಹಿಳೆಯೊಬ್ಬಳು ತನಗೆ ಹರಕ್ ಸಿಂಗ್ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ದೆಹಲಿಯಲ್ಲಿ ದೂರು ನೀಡಿದ್ದರು. ಆ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ.
ಉತ್ತರಾಖಂಡ ಕೃಷಿ ಸಚಿವರಾಗಿದ್ದ ಹರಕ್ ಸಿಂಗ್ ಅವರು ಹರೀಶ್ ರಾವತ್ ಸರ್ಕಾರದ ವಿರುದ್ಧ ಸಚಿವರು ದಂಗೆ ಎದ್ದ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ