ಅರವಿಂದ್ ಕೇಜ್ರಿವಾಲ್ ಮತ್ತು ಶರದ್ ಚೌಹಾಣ್ 
ದೇಶ

ಅರವಿಂದ್ ಕೇಜ್ರಿವಾಲ್ ಮತ್ತೊಂದು ಆಘಾತ : ಆಪ್ ಶಾಸಕ ಶರದ್ ಚೌಹಾಣ್ ಬಂಧನ

ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪದ ಮೇಲೆ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ...

ನವದೆಹಲಿ: ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪದ ಮೇಲೆ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದ ಮೇಲೆ ಕಳೆದ ಬುಧವಾರ ಆಪ್ ಕಾರ್ಯಕರ್ತ ರಮೇಶ್ ಭಾರದ್ವಾಜ್ ಅವರನ್ನು ಬಂಧಿಸಲಾಗಿತ್ತು.

ಪಕ್ಷದಲ್ಲಿನ ಕಿರುಕುಳ ಕಾರಣ ಹೇಳಿಕೊಂಡು ಪಕ್ಷದ ಮಹಿಳಾ ಕಾರ್ಯಕರ್ತೆ ಸೋನಿ ಜುಲೈ 19ರಂದು ಇಲ್ಲಿನ ನರೇಲಾ ಎನ್ನುವಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯ ಶಾಸಕರ ಕಿರಿಕಿರಿಯಿಂದ ಸಾಕಷ್ಟು ಖಿನ್ನತೆಗೆ ಒಳಗಾಗಿದ್ದರು ಸೋನಿ ಪೋಷಕರು ಆರೋಪಿಸಿ ದೂರು ನೀಡಿದ್ದರು.

ಪೊಲೀಸರು ನೀಡಿರುವ ಮಾಹಿತಿಯಂತೆ, ಸೋನಿ ಆತ್ಮಹತ್ಯೆಗೂ ಮುನ್ನ ವಾಟ್ಸ್​ಆಪ್​ನಲ್ಲಿ ದಾಖಲಿಸಿದ ವಿಡಿಯೋ ಕ್ಲಿಪ್​ನಲ್ಲಿ ಭಾರದ್ವಾಜ್, ಅಮಿತ್ ಕುಮಾರ್ ಮತ್ತು ರಜನಿಕಾಂತ್ ಅವರು ತಾನು ದಾಖಲಿಸಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಬೆದರಿಸಿದ್ದರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಜೂನ್ 2ರಂದು ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!