ಭೀವಂಡಿ(ಮುಂಬೈ): ಮುಂಬೈನ ಭೀವಂಡಿಯ ಗರೀಬಿ ನಗರ ಪ್ರದೇಶದಲ್ಲಿ ಮೂರಂತಸ್ಥಿನ ಕಟ್ಟವೊಂದು ಕುಸಿದು ಬಿದ್ದ ಪರಿಣಾಮ 6 ಮಂದಿ ಸಾನ್ನಪ್ಪಿರುವ ಘಟನೆ ನಡೆದಿದೆ.
ಶಿಥಿಲಗೊಂಡಿದ್ದ ಹಳೆಯ ಕಟ್ಟಡ ಭಾನುವಾರ ಬೆಳಗ್ಗೆ 9.15ರ ಸುಮಾರಿಗೆ ಕುಸಿದು ಬಿದ್ದು ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ 25 ಮಂದಿಯನ್ನು ರಕ್ಷಿಸಿದ್ದಾರೆ.
ಕುಸಿದಿರುವ ಕಟ್ಟಡ ಅಪಾಯಕಾರಿ ಕಟ್ಟಡಗಳ ಪಟ್ಟಿಯಲ್ಲಿತ್ತು. ಹೀಗಾಗಿ ಕಟ್ಟಡ ತೆರವಿಗೆ ಸಂಬಂಧಪಟ್ಟವರಿಗೆ ನೋಟೀಸ್ ನೀಡಲಾಗಿತ್ತು ಎಂದು ಮುನಿಸಿಪಲ್ ಕಾರ್ಪೋರೇಷನ್ ಅಧಿಕಾರಿ ತಿಳಿಸಿದ್ದಾರೆ.