ದೇಶ

ಉ.ಪ್ರದೇಶ ಸಂಪೂರ್ಣ ಜಂಗಲ್ ರಾಜ್: ಬುಲಂದಶೇರ್ ರೇಪ್ ನಂತರ ಮಾಯಾ

Lingaraj Badiger
ಲಖನೌ: ಬುಲಂದಶೇರ್ ನಲ್ಲಿ ತಾಯಿ ಮತ್ತು ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಬಿಎಸ್ಪಿ ನಾಯಕಿ ಮಾಯಾವತಿ ಅವರು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಭಾನುವಾರ ಆಗ್ರಹಿಸಿದ್ದಾರೆ.
ಅತ್ಯಾಚಾರ ಪ್ರಕರಣದ ನಂತರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿರುವುದರಿಂದ ರಾಜ್ಯದಲ್ಲಿ ಇಂತಹ ಹೀನ ಕೃತ್ಯಗಳು ನಡೆಯುತ್ತಿವೆ. ಉತ್ತರ ಪ್ರದೇಶ ಈಗ ಸಂಪೂರ್ಣ ಜಂಗಲ್ ರಾಜ್ ಆಗಿದೆ ಎಂದು ಆರೋಪಿಸಿದ್ದಾರೆ.
ಜನರಿಗೆ ರಕ್ಷಣೆ ನೀಡುವಲ್ಲಿ ವಿಶೇಷವಾಗಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಮಾಜವಾದಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂಬುದು ಇಂತಹ ಘಟನೆಗಳಿಂದ ಸ್ಪಷ್ಟವಾಗುತ್ತದೆ ಎಂದು ಅಖಿಲೇಶ್ ಯಾದವ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕಾಂಗ್ರೆಸ್ ಸಹ ತಾಯಿ, ಮಗಳ ಮೇಲಿನ ಅತ್ಯಾಚಾರವನ್ನು ಖಂಡಿಸಿದ್ದು, ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ವಕ್ತಾರ ಡಿ.ಪಿ.ಸಿಂಗ್ ಅವರು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 9ರ ಮೂಲಕವಾಗಿ ತಮ್ಮ ಸ್ವಗ್ರಾಮಕ್ಕೆ ಮರಳುತ್ತಿದ್ದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ಎಳೆದೊಯ್ದ ದರೋಡೆಕೋರರು 3 ಗಂಟೆಗಳ ಕಾಲ ಅತ್ಯಾಚಾರ ನಡೆಸಿ, ಅವರ ಬಳಿಯಿದ್ದ ಚಿನ್ನಾಬರಣ ಹಾಗೂ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಬುಲಂದಶಹರ್ ಗ್ರಾಮದಲ್ಲಿ ನಡೆದಿದೆ.
SCROLL FOR NEXT