ಎಡಿಎಂಕೆ ಸಂಸದೆ ಶಶಿಕಲಾ ಪುಷ್ಪ 
ದೇಶ

ಡಿಎಂಕೆ ಸಂಸದನಿಗೆ ಕಪಾಳಮೋಕ್ಷ: ಎಡಿಎಂಕೆ ಸಂಸದೆ ಶಶಿಕಲಾ ಪುಷ್ಪ ಪಕ್ಷದಿಂದ ವಜಾ

ಪಕ್ಷಕ್ಕೆ ಅಪಖ್ಯಾತಿ ತಂದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಸಂಸದೆ ಶಶಿಕಲಾ ಪುಷ್ಪ ಅವರನ್ನು ಪಕ್ಷದಿಂದ...

ಚೆನ್ನೈ: ಪಕ್ಷಕ್ಕೆ ಅಪಖ್ಯಾತಿ ತಂದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಸಂಸದೆ ಶಶಿಕಲಾ ಪುಷ್ಪ ಅವರನ್ನು ಪಕ್ಷದಿಂದ ಸೋಮವಾರ ವಜಾಗೊಳಿಸಲಾಗಿದೆ.
ಇಂದು ಬೆಳಗ್ಗೆ ರಾಜ್ಯಸಭೆಯಲ್ಲಿ ಆರೋಪಿಸಿದ ಶಶಿಕಲಾ, ಪಕ್ಷದ ನಾಯಕಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಯಿತು ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದು ತಾವು ರಾಜೀನಾಮೆ ನೀಡುವುದೇ ಇಲ್ಲ ಎಂದು ತಿಳಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಕಳೆದ ಶನಿವಾರ ಡಿಎಂಕೆ ಸಂಸದ ತಿರುಚಿ ಎನ್ ಶಿವ ಅವರೊಂದಿಗೆ ಜಗಳ ಮಾಡಿಕೊಂಡ ಹಿನ್ನೆಲೆಯಲ್ಲಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ವರದಿಗಳ ಪ್ರಕಾರ, ಎಡಿಎಂಕೆ ಪಕ್ಷ ಮತ್ತು ಮುಖ್ಯಸ್ಥರ ವಿರುದ್ಧ ಕೆಲವೊಂದು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶಶಿಕಲಾ ಕೋಪಗೊಂಡು ಶಿವ ಅವರಿಗೆ ಹೊಡೆದಿದ್ದರು ಎಂದು ಹೇಳಲಾಗಿದೆ.
ಆದರೆ ಸಂದರ್ಶನವೊಂದರಲ್ಲಿ ಶಶಿಕಲಾ ತಮ್ಮ ವಿರುದ್ಧ ಯಾವುದೇ ಅವಹೇಳನಕಾರಿ ಟೀಕೆಗಳನ್ನು ಮಾಡಿಲ್ಲ ಎಂದು ತಿಳಿಸಿದ್ದಾರೆ. ನಾನು ಸಂಸದ ಎಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಗೌರವ ತೋರಿಸಿದ್ದು ಆಕೆಗೆ ಸಿಟ್ಟು ತರಿಸಿತ್ತು. ಆಕೆ ನನಗೆ ಹೊಡೆದ ನಂತರ ಕೇಂದ್ರ ಮೀಸಲು ಪಡೆಯ ಭದ್ರತಾ ಸಿಬ್ಬಂದಿ ಮಧ್ಯೆ ಪ್ರವೇಶಿಸಿ ಯಾಕೆ ಹಾಗೆ ಮಾಡಿದಿರಿ ಎಂದು ಕೇಳಿದರು ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ದೂರು ದಾಖಲಿಸುತ್ತೀರಾ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ನಾನಾಗಲಿ, ನಮ್ಮ ಪಕ್ಷವಾಗಲಿ ಈ ಪ್ರಕರಣದಿಂದ ರಾಜಕೀಯ ಲಾಭ ಪಡೆದುಕೊಳ್ಳಲು ಬಯಸುವುದಿಲ್ಲ. ನಾನು ನನ್ನ ಪಕ್ಷದ ಮುಖ್ಯಸ್ಥರಿಂದ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಟಿರುಚಿ ಎನ್ ಶಿವ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT