ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿರುವ ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರನ್ನು ಕೂಡಲೇ ಬಂಧಿಸಿ, ಇಲ್ಲವಾದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವೆ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯೆ ಅಂಜಲಿ ದಮಾನಿಯಾ ಎಚ್ಚರಿಸಿದ್ದಾರೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕ್ ನಿಂದ ಮಹಾರಾಷ್ಟ್ರದ ಬಿಜೆಪಿ ಮುಖಂಡ, ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರಿಗೆ ಅತೀ ಹೆಚ್ಚು ಬಾರಿ ಕರೆ ಮಾಡಿದ್ದಾರೆ ಎಂದು ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನೋನ್ ಆರೋಪಿಸಿದ್ದರು. ಆದರೆ ಸರ್ಕಾರ ತನಿಖೆಯಲ್ಲಿ ಮಾತ್ರ ಆರೋಪ ಸಾಬೀತಾದರೆ ಮಾತ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು.
ಖಾಡ್ಸೆ ವಿರುದ್ಧ ಎಲ್ಲಾ ಸಾಕ್ಷಿಗಳನ್ನು ಸರ್ಕಾರಕ್ಕೆ ನಾನು ಒದಗಿಸುತ್ತೇನೆ ಎಂದಿರುವ ದಮಾನಿಯಾ, ಪ್ರತಿ ದಿನ ವರದಿಗಳನ್ನು ನೋಡುತ್ತಿದ್ದೇನೆ. ಆದರೆ ಖಾಡ್ಸೆ ವಿರುದ್ಧ ಮಾತ್ರ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಖಾಡ್ಸೆ ರಾಜಿನಾಮೆ ನೀಡಬೇಕು ಹಾಗೂ ಆರು ತಿಂಗಳೊಳಗಾಗಿ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics