ನವದೆಹಲಿ: ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷ ಪಟ್ಟ ಕಟ್ಟಿ ಕಾರ್ಯನಿರ್ವಹಣೆಗೆ ಅನುವು ಮಾಡಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಬಹುಕಾಲದಿಂದ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡುವುದರ ಬಗ್ಗೆ ಬರೀ ಚರ್ಚೆ ನಡೆಸಲಾಗುತ್ತಿದೆ. ಅದಕ್ಕೆ ಅಂತ್ಯವಾಡಿ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡಿ ಕಾರ್ಯನಿರ್ವಹಿಸಲು ಬಿಡಿ ಎಂದು ಒಮರ್ ಅವರು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ಎಐಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ಎಐಸಿಸಿ ಮೂಲಗಳು ತಿಳಿಸಿದ್ದವು. ಈ ಹಿನ್ನಲೆಯಲ್ಲಿ ಒಮರ್ ಅಬ್ದುಲ್ಲಾ ಅವರು ರಾಹುಲ್ ಗಾಂಧಿಯನ್ನು ಅಧ್ಯಕ್ಷ ಸ್ಥಾನಕ್ಕೆ ಶೀಘ್ರ ನೇಮಕ ಮಾಡಿ ಎಂದು ಕಾಂಗ್ರೆಸ್ ಗೆ ತಿಳಿಸಿದ್ದಾರೆ.