ಬಿಹಾರ 
ದೇಶ

ಬಿಹಾರ ರಾಜ್ಯಸಭಾ ಚುನಾವಣೆ: ಅವಿರೋಧವಾಗಿ ಆಯ್ಕೆಗೊಂಡ ಎಲ್ಲಾ ಅಭ್ಯರ್ಥಿಗಳು

ಬಿಹಾರದಲ್ಲಿ ರಾಜ್ಯಸಭಾ ಚುನಾವಣೆಯ ನಾಮಪತ್ರವನ್ನು ಹಿಂಪಡೆಯಲು ನಿಗದಿಪಡಿಸಿದ್ದ ದಿನಾಂಕ ಮುಕ್ತಾಯಗೊಂಡಿದ್ದು, ನಾಮಪತ್ರ ಸಲ್ಲಿಸಿದ್ದ ಎಲ್ಲಾ 5 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಪಾಟ್ನಾ: ಬಿಹಾರದಲ್ಲಿ ರಾಜ್ಯಸಭಾ ಚುನಾವಣೆಯ ನಾಮಪತ್ರವನ್ನು ಹಿಂಪಡೆಯಲು ನಿಗದಿಪಡಿಸಿದ್ದ ದಿನಾಂಕ ಮುಕ್ತಾಯಗೊಂಡಿದ್ದು, ನಾಮಪತ್ರ ಸಲ್ಲಿಸಿದ್ದ ಎಲ್ಲಾ 5 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಜೆಡಿಯು ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ಶರದ್ ಯಾದವ್, ಆರ್ ಜೆ ಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಸಹ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ರೀತಿಯಲ್ಲಿ ಮಹಾಮೈತ್ರಿ ಕೂಟದ ಏಳು ಅಭ್ಯರ್ಥಿಗಳು ಬಿಹಾರ ವಿಧಾನ ಪರಿಷತ್ ಗೆ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ನಾಮಪತ್ರ ಹಿಂಪಡೆಯಲು ಇದ್ದ ಅವಧಿ ಮುಕ್ತಾಯಗೊಂಡಿದ್ದು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಐವರು ರಾಜ್ಯಸಭಾ ಅಭ್ಯರ್ಥಿಗಳು ಮಹಾಮೈತ್ರಿಕೂಟದಿಂದ ಹಾಗೂ ಬಿಜೆಪಿಯಿಂದ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಮಿಸಾ ಭಾರತಿ ಹಾಗೂ ರಾಮ್ ಜೇಠ್ಮಲಾನಿ ಅವರನ್ನು ರಾಜ್ಯಸಭಾ ಚುನಾವಣೆ ಅಭ್ಯರ್ಥಿಗಳನ್ನಾಗಿ ಘೋಷಿಸಿತ್ತು. ಇನ್ನು ಜೆಡಿಯು ಪಕ್ಷದ ಹಾಲಿ ರಾಜ್ಯಸಭಾ ಸಂಸದರಾಗಿದ್ದ ಶರದ್ ಯಾದವ್ ಅವರನ್ನು ಜೆಡಿಯು ಮತ್ತೊಮ್ಮೆ ಕಣಕ್ಕಿಳಿಸಿತ್ತು. ಬಿಜೆಪಿಯಿಂದ ಗೋಪಾಲ್ ನಾರಾಯಣ್ ಸಿಂಗ್ ಸ್ಪರ್ಧಿಸಿದ್ದರು. ಬಿಹಾರದಿಂದ ಸ್ಪರ್ಧಿಸಿದ್ದ ಎಲ್ಲಾ 5 ಅಭ್ಯರ್ಥಿಗಳು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಗೊಂಡಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!