ಅಖಿಲೇಶ್ ಯಾದವ್ 
ದೇಶ

ಮಥುರಾ ಘರ್ಷಣೆ: ಮೃತಪಟ್ಟ ಪೊಲೀಸರ ಕುಟುಂಬಕ್ಕೆ ರು.20 ಲಕ್ಷ ಪರಿಹಾರ ಘೋಷಿಸಿದ ಅಖಿಲೇಶ್

ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ರಿಕ್ತ ಜನರ ಗುಂಪು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ ವೇಳೆ...

ಮಥುರಾ: ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ರಿಕ್ತ ಜನರ ಗುಂಪು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ ವೇಳೆ ಮೃತಪಟ್ಟ ಇಬ್ಬರು ಪೊಲೀಸರ ಕುಟುಂಬಕ್ಕೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ರು.20 ಲಕ್ಷ ಪರಿಹಾರ ಘೋಷಿಸಿದ್ದಾರೆ. 
ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಬೆಂಬಲಿಗರು ಎಂದು ಹೇಳಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಉದ್ರಿಕ್ತರ ಗುಂಪೊಂದು ನೇರ ಪೊಲೀಸರ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. 
ಈ ವೇಳೆ ಕಾರ್ಯಾಚರಣೆ ನಿರತ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದ ಮತ್ತೋರ್ವ ಪೊಲೀಸ್ ಕಾನ್ಸ್ ಟೇಬಲ್ ಕೂಡ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘರ್ಷಣೆ ಸ್ಥಳದಿಂದ ದೇಶ ನಿರ್ಮಿತ ಪಿಸ್ತೂಲು, ರೈಫಲ್, ಮತ್ತು ಕ್ಯಾಟ್ರಿಡ್ಜ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಂತೆ ಪೊಲೀಸರಿಗೆ ಸೂಚಿಸಿರುವ ಸಿಎಂ ಅಖಿಲೇಶ್ ಯಾದವ್ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಂಧ್ರಪ್ರದೇಶ: ಖಾಸಗಿ ಬಸ್ ಕಂದಕಕ್ಕೆ ಉರುಳಿ ಕನಿಷ್ಠ 9 ಮಂದಿ ಸಾವು, ಹಲವರು ಗಾಯ

ಬೆಳಗಾವಿ ಅಧಿವೇಶನ ಮಧ್ಯೆ ಡಿನ್ನರ್ ಪಾಲಿಟಿಕ್ಸ್: ಸಿಎಂ ಬೆನ್ನಲ್ಲೇ 30ಕ್ಕೂ ಹೆಚ್ಚು ಶಾಸಕರ ಜೊತೆ ಡಿಸಿಎಂ ಮೀಟಿಂಗ್

ವಿಜಯಪುರ: ವಚನಶಿಲಾ ಮಂಟಪದ ಸ್ಥಾಪಕ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ 300 ವಿದೇಶಿ ಪ್ರಜೆಗಳ ಗಡಿಪಾರು: ಪರಿಷತ್ ನಲ್ಲಿ ಪರಮೇಶ್ವರ್ ಮಾಹಿತಿ

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

SCROLL FOR NEXT