ಮಥುರಾ: ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಯಾದವ್ ಅವರಿಗೆ ಕರೆ ಮಾಡಿ ಮಾತನಾಡಿದ ಅವರು, ಘರ್ಷಣೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದು, ರಾಜ್ಯಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
'ನಾನು ಅಖಿಲೇಶ್ ಯಾದವ್ ಅವರ ಬಳಿ ಮಥುರಾ ಘರ್ಷಣೆ ಕುರಿತು ಮಾತನಾಡಿದ್ದೇನೆ. ಪರಿಸ್ಥಿತಿ ಬಗ್ಗೆ ಅಖಿಲೇಶ್ ವಿವರಿಸಿದ್ದಾರೆ. ಕೇಂದ್ರದಿಂದ ಅಗತ್ಯ ಸಹಾಯ ಒದಗಿಸುವುದಾಗಿ ಭರವಸೆ ನೀಡಿದ್ದೇವೆ. ಮೃತಪಟ್ಟವರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.