ಜಮ್ಮು: ಜಮ್ಮು ಕಾಶ್ಮೀರದ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುತುವಾದಿಂದ ಜಮ್ಮು ಕಡೆಗೆ ತೆರಳುತ್ತಿದ್ದ ಟ್ರೈಲೆರ್ ವಾಹನ ಪಠಾಣ್ ಕೋಟ್- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಗಳಿಗೆ, ವಾಹನ ಮತ್ತು ಅಂಗಡಿಗಳಿಗೆ ಡಿಕ್ಕಿ ಹೊಡೆದಿದೆ.
ಟ್ರೈಲೆರ್ ವಾಹನಕ್ಕೆ ಸಿಲುಕಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂ ಆಗಿವೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 9ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.