ಪುದುಚೆರಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೂತನ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಭಾನುವಾರ ಪೌರ ಕಾರ್ಮಿಕರೊಡನೆ ಸೇರಿ ಪುದುಚೆರಿಯಲ್ಲಿ ಕಸ ವಿಲೇವಾರಿ ಕಾರ್ಯದಲ್ಲಿ ಪಾಲ್ಗೊಂಡರು.
ನಗರಪಾಲಿಕೆ ಕಾರ್ಮಿಕರೊಡನೆ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಟ್ರೀಟ್ ಮತ್ತು ಗಿಂಗೀ ಸಾಲೈನಲ್ಲಿ ಕಸವಿಲೇವಾರಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಪುದುಚ್ಚೇರಿಯನ್ನು ಸ್ವಚ್ಚ ನಗರವನ್ನಾಗಿಸಲು ಪೌರ ಕಾರ್ಮಿರೊಡನೆ ಪ್ರತಿ ಭಾನುವಾರವೂ ಕೆಲಸ ಮಾಡುವುದಾಗಿ ಹೇಳಿದರು. ಸಮಾಜದಲ್ಲಿ ಪೌರ ಕಾರ್ಮಿಕರು ಮತ್ತು ಪೊಲೀಸರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅವರು ಹೇಳಿದರು.
ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯದರ್ಶಿ ತೇವಾ ನೀದಿ ದಾಸ್, ರಾಜ್ ನಿವಾಸ್ ಮತ್ತಿತರ ಅಧಿಕಾರಿಗಳು ಹಾಗೂ ಉನ್ನತ ಶ್ರೇಣಿಯ ಪೊಲೀಸ್ ಅಧಿಕಾರಿಗಳೂ ಕಸ ವಿಲೇವಾರಿ ಕಾರ್ಯದಲ್ಲಿ ಪಾಲ್ಗೊಂಡರು.