ಸಾಂದರ್ಭಿಕ ಚಿತ್ರ 
ದೇಶ

ಮಥುರಾ ಘರ್ಷಣಾ ಸ್ಥಳದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ

ಮಥುರಾ ಘರ್ಷಣೆ ಸಂಭವಿಸಿದ ಸ್ಥಳದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ ಎಂದು ಪೊಲೀಸರು...

ಮಥುರಾ: ಮಥುರಾ ಘರ್ಷಣೆ ಸಂಭವಿಸಿದ ಸ್ಥಳದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಮಥುರಾದ ಜವಾಹರ್ ಬಾಗ್ ನಲ್ಲಿ ಹಿಂಸಾಚರ ನಡೆದು 24 ಮಂದಿ ಮೃತಪಟ್ಟಿದ್ದರು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿರುವ ಪೊಲೀಸರು ತಪಾಸಣೆ ಕಾರ್ಯ ಕೈಗೊಂಡಿದ್ದರು. ಈ ವೇಳೆ ಘರ್ಷಣಾ ಸ್ಥಳದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿವೆ ಎಂದು ವರದಿಯಾಗಿದೆ. 
5 ಕೆಜಿ ಗಂಧಕ, 2.5 ಕೆಜಿ ಗನ್ ಪೌಡರ್, 1 ಕೆಜಿ ಪೋಟಾಶ್, 500 ಗ್ರಾಮ್ ಕಬ್ಬಿಣದ ಗುಂಡುಗಳು ಮತ್ತು ಎಲೆಕ್ಟ್ರಾನಿಕ್ ಪ್ಲೇಟ್ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿ ಅರುಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಘರ್ಷಣಾ ಸ್ಥಳಕ್ಕೆ ಹೆಚ್ಚಿನ ಮಟ್ಟದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಮತ್ತಷ್ಟು ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಬಂಧನ,ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!