ಪುಣೆ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ 17 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಇಂದು ಬೆಳಿಗ್ಗೆ ಸುಖಪುರ್ ಬಳಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದು ಮಗು, ಏಳು ಮಹಿಳೆಯರು ಸೇರೆ 17 ಮಂದಿ ದುರ್ಮರಣ ಹೊಂದಿದ್ದಾರೆ.
ಇನ್ನು ಘಟನೆಯಲ್ಲಿ 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ. ಕಾರುಗಳಿಗೆ ಡಿಕ್ಕೆ ಹೊಡೆದ ಬಸ್ ನಿಯಂತ್ರಣ ತಪ್ಪಿ 20 ಅಡಿ ಕಂದಕಕ್ಕೆ ಉರುಳಿದೆ.