ಮಥುರಾ ಗಲಭೆ (ಸಂಗ್ರಹ ಚಿತ್ರ) 
ದೇಶ

ಮಥುರಾ ಗಲಭೆ: ಜಿಲ್ಲಾ ಮ್ಯಾಜಿಸ್ಟ್ರೇಟ್, ಎಸ್ಎಸ್ ಪಿ ಎತ್ತಂಗಡಿ

29 ಜನರ ಧಾರುಣ ಸಾವಿಗೆ ಕಾರಣವಾಗಿದ್ದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಹಿರಿಯ ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ...

ಲಖನೌ: 29 ಜನರ ಧಾರುಣ ಸಾವಿಗೆ ಕಾರಣವಾಗಿದ್ದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಹಿರಿಯ ಪೊಲೀಸ್  ಅಧೀಕ್ಷಕರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಜವಾಹರ್ ಭಾಗ್ ಕ್ರಾಂತಿಕಾರಿಗಳು ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಜಾಗವನ್ನು ತೆರವುಗೊಳಿಸುವಲ್ಲಿ ವಿಫಲರಾದ ಪೊಲೀಸರ ಮೇಲೆ ಸ್ಥಳೀಯ ಪ್ರಭಾವಿ ರಾಜಕಾರಣಿಗಳ ಒತ್ತಡವಿತ್ತು ಎಂಬ  ಬಿಜೆಪಿ ಆರೋಪದ ಹೊರತಾಗಿಯೂ ಇಂದು ಸಿಎಂ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಶ್ ಕುಮಾರ್ ಮತ್ತು ಹಿರಿಯ ಪೊಲೀಸ್ ಅಧೀಕ್ಷಕ ರಾಕೇಶ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಿದೆ.

ರಾಕೇಶ್ ಕುಮಾರ್ ಸಿಂಗ್ ಅವರ ಬದಲಿಗೆ ಎಸ್ ಪಿ ಜಲೌನ್ ರನ್ನು  ಸರ್ಕಾರ ನೇಮಕ ಮಾಡಿದ್ದು, ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಾನಕ್ಕೆ ಇನ್ನಷ್ಟೇ ಆಯ್ಕೆ ನಡೆಸಬೇಕಿದೆ ಎಂದು ಸರ್ಕಾರದ ವಕ್ತಾರ  ಬಬ್ಲೂ ಕುಮಾರ್ ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ ಉತ್ತರ ಪ್ರದೇಶ ಸರ್ಕಾರ
ಇನ್ನು ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಮಂದಿಯ ಸಾವಿಗೆ ಕಾರಣವಾದ ಜವಾಹರ್ ಭಾಗ್ ಗಲಭೆ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆಗೆ ಉತ್ತರ ಪ್ರದೇಶ ಸರ್ಕಾರ ತನ್ನ  ವರದಿ ನೀಡಿದೆ. ವರದಿಯಲ್ಲಿ ಜವಾಹರ್ ಭಾಗ್ ಕ್ರಾಂತಿಕಾರಿಗಳು ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಜಾಗವನ್ನು ತೆರವುಗೊಳಿಸುವಲ್ಲಿ ವಿಫಲರಾದ ಪೊಲೀಸರ ಮೇಲೆ ಸ್ಥಳೀಯ ಪ್ರಭಾವಿ  ರಾಜಕಾರಣಿಗಳ ಒತ್ತಡವಿತ್ತು ಎಂಬ ಬಿಜೆಪಿ ಆರೋಪವನ್ನು ಸಿಎಂ ಅಖಿಲೇಶ್ ಯಾದವ್ ಸರ್ಕಾರ ತಳ್ಳಿ ಹಾಕಿದ್ದು, ಸ್ಥಳೀಯ ಜಿಲ್ಲಾಡಳಿತದ ವೈಫಲ್ಯದಿಂದಾಗಿ ಗಲಭೆ ಸಂಭವಿಸಿದೆ ಎಂದು  ಸರ್ಕಾರ ವರದಿಯಲ್ಲಿ ಹೇಳಿದೆ.

ರಾಮ್ ವೃಕ್ಷ್ ಯಾದವ್ ನೇತೃತ್ವದ ಕ್ರಾಂತಿಕಾರಿಗಳು ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಿಕೊಳ್ಳುವ ಮೊದಲೇ ಪೊಲೀಸರನ್ನು ಜವಾಹರ್ ಭಾಗ್ ಗೆ ರವಾನಿಸಲಾಗಿತ್ತು ಎಂದು ಸರ್ಕಾರ ತನ್ನ  ವರದಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT