ಇಟಾ: ಕಳೆದ ಎರಡು ವರ್ಷಗಳಿಂದ ಬಿಜೆಪಿ ಏನು ಮಾಡಿದೆ? ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಶ್ನೆಗೆ ತಿರುಗೇಟು ನೀಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ನಮ್ಮ ಪಕ್ಷ ದೇಶಕ್ಕೆ ಮಾತನಾಡುವ ಪ್ರಧಾನಿಯನ್ನು ನೀಡಿದೆ ಎಂದಿದ್ದಾರೆ.
ಇತ್ತೀಚಿಗೆ ರಾಹುಲ್ ಗಾಂಧಿ ಅವರು ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಏನು ಮಾಡಿದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ತಿರುಗೇಟು ನೀಡಿದ ಅಮಿತ್ ಶಾ, ಕನಿಷ್ಠ ನಾವು ಮಾತನಾಡುವ ಪ್ರಧಾನಿಯನ್ನಾದರೂ ಕೊಟ್ಟಿದ್ದೇವೆ. ಆದರೆ ಕಳೆದ 10 ವರ್ಷಗಳ ಯುಪಿಎ ಸರ್ಕಾರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬಿಟ್ಟರೆ ಪ್ರಧಾನಿ ಧ್ವನಿ ಯಾರಿಗೂ ಕೇಳಿಸಲೇ ಇಲ್ಲ ಎಂದರು.
ಇದೇ ವೇಳೆ ಉತ್ತರಪ್ರದೇಶದ ಆಡಳಿತರೂಢ ಸಮಾಜವಾದಿ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ, 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದರು. ಅಲ್ಲದೆ ಕಳೆದ ನಾಲ್ಕು ವರ್ಷಗಳಲ್ಲಿ ಸಮಾಜವಾದಿ ಪಕ್ಷದ ರಾಜ್ಯದ ಜನತೆಗಾಗಿ ಏನು ಮಾಡಿದೆ ಎಂದು ಪ್ರಶ್ನಿಸಿದರು.
ನಾವು ಎನ್ ಡಿಎ ಸರ್ಕಾರದ ಎರಡು ವರ್ಷಗಳ ವರದಿಯನ್ನು ಸಲ್ಲಿಸುತ್ತಿದ್ದೇವೆ. ಹೀಗಾಗಿ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಸಹ ಕಳೆದ ನಾಲ್ಕು ವರ್ಷಗಳಲ್ಲಿ ಏನು ಮಾಡಿದೆ ಎಂಬುದನ್ನು ಜನತೆಗೆ ತಿಳಿಸಲಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics