ದಾವೂದ್ ಇಬ್ರಾಹಿಂ 
ದೇಶ

ದೆಹಲಿಯಲ್ಲಿ ಸರಣಿ ಸ್ಫೋಟ ನಡೆಸಲು ದಾವೂದ್ ಗ್ಯಾಂಗ್ ಸಂಚು?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಸಂಚು ನಡೆಸಿದೆ ಎಂದು...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಸಂಚು ನಡೆಸಿದೆ ಎಂದು ವರದಿ ತಿಳಿಸಿದೆ.

1993 ರಲ್ಲಿ ಮುಂಬಯಿಯಲ್ಲಿ ನಡೆದ ಸರಣಿ ಸ್ಫೋಟದಂತೆ ದೆಹಲಿಯಲ್ಲೂ ನಡೆಸುವಂತೆ ದಾವೂದ್ ತನ್ನ ಸಹಚರರಿಗೆ ಆದೇಶ ನೀಡಿದ್ದಾನೆ ಎನ್ನಲಾಗಿದೆ. ನಕಲಿ ನೋಟು ಮುದ್ರಣ, ಭಾರತದಲ್ಲಿ ಡ್ರಗ್ಸ್ ಪೂರೈಕೆ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ದಾವೂದ್ ದೇಶಾದ್ಯಂತ ಉಗ್ರ ಚಟುವಟಿಕೆಗಳನ್ನು ನಡೆಸಲು ಸಂಚು ನಡೆಸಿದ್ದಾನೆ ಎಂದು ಗುಪ್ತ ಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ  ಸರಣಿ ಬಾಂಬ್ ಸ್ಫೋಟ ನಡೆಸಲು ಮಧ್ಯಪ್ರದೇಶದಲ್ಲಿ ಕೆಲ ಮಂದಿಗೆ ತರಬೇತಿ ನೀಡಲಾಗಿದ್ದು, ಅವರು ಈಗಾಗಲೇ ದೆಹಲಿ ತಲುಪಿದ್ದಾರೆ ಎಂದು ವರದಿಗಳು ತಿಳಿಸಿವೆ.ದೆಹಲಿ ಪೊಲೀಸರು ಡಿ ಗ್ಯಾಂಗ್ ನ ಭಯೋತ್ಪಾದಕರನ್ನು ಸೆರೆ ಹಿಡಿಯಲು ಬಲೆ ಬೀಸಿದ್ದಾರೆ.

ದೆಹಲಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೋ, ವಿಧಾನಸಭೆ ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಎಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel