ಬಿಹಾರ ಟಾಪರ್ ಗಳ ವಿರುದ್ಧ ಎಫ್ ಐಆರ್ ದಾಖಲು
ಬಿಹಾರ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಸ್ಥಾನ ಪಡೆದ 4 ವಿದ್ಯಾರ್ಥಿಗಳಿಗೆ ನಡೆಸಲಾದ ಮರು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಾಲ್ಕು ವಿದ್ಯಾರ್ಥಿಗಳು ಹಾಗೂ ವಿ ಆರ್...
ಪಾಟ್ನಾ: ಬಿಹಾರ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಸ್ಥಾನ ಪಡೆದ 4 ವಿದ್ಯಾರ್ಥಿಗಳಿಗೆ ನಡೆಸಲಾದ ಮರು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಾಲ್ಕು ವಿದ್ಯಾರ್ಥಿಗಳು ಹಾಗೂ ವಿ ಆರ್ ಕಾಲೇಜಿನ ನಿರ್ದೇಶಕನ ವಿರುದ್ಧ ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಾ ವಿಭಾಗದಲ್ಲಿ ಅಗ್ರಸ್ಥಾನ ಪಡೆದ ರೂಬಿ ರಾಯ್ ರಾಯಕೀಯ ಶಾಸ್ತ್ರ ಅಡುಗೆ ಸಬ್ಜೆಕ್ಟ್ ಎಂದ ಬೆನ್ನಲ್ಲೇ ಪಿಯು ಪರೀಕ್ಷಾ ಮಂಡಳಿ 14 ಟಾಪರ್ಗಳಿಗೆ ಮರು ಪರೀಕ್ಷೆ ನಡೆಸಿತ್ತು. ಇದರಲ್ಲಿ ಸೌರಭ್ ಶ್ರೇಷ್ಠ, ರಾಹುಲ್ ಕುಮಾರ್, ರೂಬಿ ರಾಯ್ ಹಾಗೂ ಶಾಲಿನಿ ಎಂಬುವರು ಅನುತ್ತೀರ್ಣರಾಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ ಅಪರಾಧವೆಸಗಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ತನಿಖೆ ನಡೆಸಲಾಗುವುದು ಎಂದಿದ್ದಾರೆ. ವಿಶೇಷ ತನಿಖಾ ತಂಡ 10 ದಿನದಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.