ದೇಶ

ದಾದ್ರಿ ಪ್ರಕರಣ: ಅಖ್ಲಾಕ್ ಕುಟುಂಬಸ್ಥರ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ ಗ್ರಾಮಸ್ಥರು

Manjula VN

ಗ್ರೇಟರ್ ನೊಯ್ಡಾ: ದೇಶದಾದ್ಯಂತ ಭಾರೀ ಸುದ್ದಿ ಮಾಡಿದ್ದ ದಾದ್ರಿ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮೃತ ಅಖ್ಲಾಕ್ ಕುಟುಂಬ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಗ್ರಾಮಸ್ಥರು ಗುರುವಾರ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಬಿಶಾಡಾ ಗ್ರಾಮಸ್ಥರು ಗೌತಮ್ ಬುದ್ಧ್ ನಗರದಲ್ಲಿರುವ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರನ್ನು ಭೇಟಿಯಾಗಿದ್ದರು. ಈ ವೇಳೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದು, ಭಾರತೀಯ ದಂಹಿತೆ ಸೆಕ್ಷನ್ 156 (3)ರ ಆಡಿಯಲ್ಲಿ ಅಖ್ಲಾಕ್ ಕುಟುಂಬಸ್ಥರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿದ್ದಾರೆಂದು ಹಿರಿಯ ಅಭಿಯೋಜಕ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕುರಿತ ವಿಚಾರಣೆ ನ್ಯಾಯಾಲಯದಲ್ಲಿ ಜೂನ್. 13 ರಂದೆ ನಡೆಯಲಿದೆ. ಅಖ್ಲಾಕ್ ಕುಟುಂಬಸ್ಥರಿಗೂ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅವಕಾಶ ನೀಡಲಾಗಿದೆ. ಪ್ರತಿಕ್ರಿಯೆ ಹಾಗೂ ಎಲ್ಲಾ ಬೆಳವಣಿಗೆಗಳನ್ನು ಅವಲೋಕಿಸಿದ ನಂತರ ಅಖ್ಲಾಕ್ ಕುಟುಂಬಸ್ಥರ ವಿರುದ್ಧ ಎಫ್ಐಆರ್ ದಾಖಲಿಸಬೇಕೋ ಇಲ್ಲವೋ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ ಎಂದು ಅವರು ಹೇಳಿದ್ದಾರೆ.

SCROLL FOR NEXT