ಸಾಂದರ್ಭಿಕ ಚಿತ್ರ 
ದೇಶ

ಹರಿಯಾಣ: ಶಾಲಾ ಶಿಕ್ಷಕರಿಗೆ ಜೀನ್ಸ್ ಉಡುಪು ನಿಷೇಧ; ವ್ಯಾಪಕ ಟೀಕೆ

ಇತ್ತೀಚೆಗೆ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಸೇರ್ಪಡೆ ಮಾಡಿದ್ದ ಹರಿಯಾಣ ಸರ್ಕಾರ ಈಗ ಸರ್ಕಾರಿ...

ಚಂಡೀಗಢ/ ನವದೆಹಲಿ: ಇತ್ತೀಚೆಗೆ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಸೇರ್ಪಡೆ ಮಾಡಿದ್ದ ಹರಿಯಾಣ ಸರ್ಕಾರ ಈಗ ಸರ್ಕಾರಿ ಶಾಲಾ ಶಿಕ್ಷಕರು ಶಾಲೆಗೆ ಬರುವಾಗ ಜೀನ್ಸ್ ಧರಿಸಿ ಬರಬಾರದು ಎಂದು ನಿಷೇಧ ಹೇರುವ ಮೂಲಕ ಹೊಸ ವಿವಾದವನ್ನು ಹುಟ್ಟು ಹಾಕಿದೆ.

ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಅವರು ಸಭ್ಯವಾದ ಉಡುಗೆ ತೊಟ್ಟು ಶಾಲೆಗಳಿಗೆ ಬರಬೇಕು. ಅವರು ಜೀನ್ಸ್ ಧರಿಸಿ ಆಗಮಿಸಿದರೆ ಅದನ್ನು ಅನುಚಿತ ಉಡುಪು ಎಂದು ಪರಿಗಣಿಸಲಾಗುವುದು ಹರಿಯಾಣದ ಪ್ರಾಥಮಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹರಿಯಾಣದಲ್ಲಿ ಸುಮಾರು 50 ಸಾವಿರ ಸರ್ಕಾರಿ ಶಾಲಾ ಶಿಕ್ಷಕರಿದ್ದು, ಅವರಲ್ಲಿ ಶೇಕಡಾ 50ರಷ್ಟು ಮಂದಿ 40 ವರ್ಷಕ್ಕಿಂತ ಕೆಳಗಿನವರು. ಇವರು ಸಾಮಾನ್ಯವಾಗಿ ಜೀನ್ಸ್ ಧರಿಸಿ ಶಾಲೆಗೆ ಆಗಮಿಸುವುದು ಇಲಾಖೆಯ ಗಮನಕ್ಕೆ ಬಂದಿದೆ. ಹಾಗಾಗಿ ಜೀನ್ಸ್ ನಿಷೇಧಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ಕೆ. ದಾಸ್ ತಿಳಿಸಿದ್ದಾರೆ.

ಆದರೆ ಸರ್ಕಾರದ ಈ ಕ್ರಮಕ್ಕೆ ಶಿಕ್ಷಕರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ರಾಜಕೀಯ ಪ್ರಾಥಮಿಕ ಶಿಕ್ಷಕ್ ಸಂಘದ ಪ್ರಧಾನ ಕಾರ್ಯದರ್ಶಿ ದೀಪಕ್ ಗೋಸ್ವಾಮಿ ಪ್ರತಿಕ್ರಿಯಿಸಿ, ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿ ಸರ್ಕಾರ ಈ ಕ್ರಮ ತೆಗೆದುಕೊಳ್ಳಬೇಕಾಗಿತ್ತು ಎಂದು ಹೇಳಿದ್ದಾರೆ. ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಶಿಕ್ಷಕರು ನಿರ್ಧರಿಸಿದ್ದಾರೆ.

ಆದೇಶ ನಿರಾಕರಿಸಿದ ಮುಖ್ಯಮಂತ್ರಿ:ಸರ್ಕಾರಿ ಶಾಲಾ ಶಿಕ್ಷಕರು ಶಾಲೆಗೆ ಬರುವಾಗ ಜೀನ್ಸ್ ಧರಿಸಿ ಬರಬಾರದು ಎಂದು ನಿಷೇಧ ಹೇರಿರುವ ವಿಷಯವನ್ನು ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ನಿರಾಕರಿಸಿದ್ದಾರೆ. ಯಾರಾದರೂ ಆದೇಶ ನೀಡಿದ್ದರೆ ಅದನ್ನು ಹಿಂತೆಗೆದುಕೊಳ್ಳುತ್ತೇವೆ. ಆದರೆ ಇಂತಹ ವಿದ್ಯಮಾನ ನಡೆದಿರಲಿಕ್ಕಿಲ್ಲ ಎಂದು ಅವರು ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT