ಗುಲಾಂ ನಬಿ ಆಜಾದ್-ಕಮಲ ನಾಥ್ 
ದೇಶ

ಎಐಸಿಸಿ ಪ್ರಧಾನ ಕಾರ್ಯದರ್ಶಿ: ಗುಲಾಮ್ ನಬಿ ಆಜಾದ್, ಕಮಲ ನಾಥ್ ನೇಮಕ

ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಂಜಾಬ್, ಹರ್ಯಾಣ ಮತ್ತು ಉತ್ತರ ಪ್ರದೇಶಗಳ ನಾಯಕತ್ವದಲ್ಲಿ ಕಾಂಗ್ರೆಸ್...

 ನವದೆಹಲಿ: ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಂಜಾಬ್, ಹರ್ಯಾಣ ಮತ್ತು ಉತ್ತರ ಪ್ರದೇಶಗಳ ನಾಯಕತ್ವದಲ್ಲಿ ಕಾಂಗ್ರೆಸ್ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಹಿರಿಯ ನಾಯಕರಾದ  ಗುಲಾಂ ನಬಿ ಆಜಾದ್ ಮತ್ತು ಕಮಲ್ ನಾಥ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿ ಭಾನುವಾರ ನೇಮಿಸಲಾಗಿದೆ.

ಜೊತೆಗೇ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಗುಲಾಂ ನಬಿ ಆಜಾದ್ ಅವರಿಗೆ ಉತ್ತರ ಪ್ರದೇಶದ ಉಸ್ತುವಾರಿಯನ್ನೂ, ಕಮಲನಾಥ್ ಅವರಿಗೆ ಪಂಜಾಬ್ ಮತ್ತು ಹರಿಯಾಣದ ಉಸ್ತುವಾರಿಯನ್ನೂ ವಹಿಸಲಾಗಿದೆ.
ಆಜಾದ್ ಮತ್ತು ಕಮಲ್ ನಾಥ್ ಮಧುಸೂದನ್ ಮಿಸ್ತ್ರಿ ಹಾಗೂ ಶಕೀಲ್ ಅಹ್ಮದ್ ಅವರ ಸ್ಥಾನವನ್ನಲಂಕರಿಸಿದ್ದಾರೆ.

ಲೋಕಸಭಾ ಚುನಾವಣೆ ಮತ್ತು ಇತ್ತೀಚೆಗೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತ ನಂತರ ನಾಯಕತ್ವದಲ್ಲಿ ಬದಲಾವಣೆ ಮಾಡಬೇಕು, ರಾಹುಲ್ ಗಾಂಧಿ ರಾಷ್ಟ್ರೀಯ ಉಸ್ತುವಾರಿ ವಹಿಸಿಕೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿರುವುದರ ಮಧ್ಯೆ ಈ ಬದಲಾವಣೆ ಮಾಡಲಾಗಿದೆ.

ಅಲ್ಲದೆ ನಿನ್ನೆ ನಡೆದ ರಾಜ್ಯಸಭಾ ಮತದಾನದಲ್ಲಿ  ಉತ್ತರ ಪ್ರದೇಶದಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದು, ಹರ್ಯಾಣದಲ್ಲಿ 14 ಮಂದಿ ಶಾಸಕರು ಉದ್ದೇಶಪೂರ್ವಕವಾಗಿ ಮತ ಚಲಾಯಿಸುವಾಗ ತಪ್ಪು ಮಾಡಿದ್ದರಿಂದ ಅವರ ಮತದಾನ ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ಆನಂದ್ ಸೋಲನುಭವಿಸಬೇಕಾಯಿತು.ಹೀಗಾಗಿ ಕಾಂಗ್ರೆಸ್ ಈ ರಾಜ್ಯಗಳ ನಾಯಕತ್ವದಲ್ಲಿ ತಕ್ಷಣವೇ ಬದಲಾವಣೆ ಮಾಡಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT