ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ದೆಹಲಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. 23 ವರ್ಷದ ಮಹಿಳೆಯೋರ್ವಳನ್ನು ಅಪಹರಣ ಮಾಡಿ ನಂತರ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ..

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. 23 ವರ್ಷದ ಮಹಿಳೆಯೋರ್ವಳನ್ನು ಅಪಹರಣ ಮಾಡಿ ನಂತರ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ನಿಜಾಮುದ್ದೀನ್ ಪ್ರದೇಶದಿಂದ ಬೇರೆಡೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮೂವರು ತಮ್ಮ ಕಾರಿನಲ್ಲಿ ಡ್ರಾಪ್‌ ಮಾಡುವುದಾಗಿ ಹೇಳಿ ಮಹಿಳೆಗೆ ಕಾರು ಹತ್ತಲು ಹೇಳಿದ್ದಾರೆ. ಆದರೆ ಅದಕ್ಕೆ ಯುವತಿ ನಿರಾಕರಣೆ ಮಾಡುತ್ತಿದ್ದಂತೆ ವಾಹನದ ಒಳಗೆ ಬಲವಂತವಾಗಿ ಆಕೆಯನ್ನು ಹತ್ತಿಸಿಕೊಂಡಿದ್ದಾರೆ.

ನಂತರ ಯುವತಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಇದಕ್ಕೆ ಯುವತಿ ಪ್ರತಿರೋಧಿಸುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಸರಿ ಸುಮಾರು ಎರಡು ಗಂಟೆಗಳ ಕಾಲ ಕಾರಿನಲ್ಲಿ ಆಕೆಗೆ ಚಿತ್ರಹಿಂಸೆ ನೀಡಿದ ಅವರು ನಂತರ ಸನ್‌‌ಲೈಟ್‌ ಕಾಲೋನಿಯ ಫ್ಲೈಓವರ್ ಸಮೀಪ ಆಕೆಯನ್ನು ಇಳಿಸಿ ಪರಾರಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಮಹಿಳೆಯ ಅಪಹರಣ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದಡಿ ಕೇಸ್‌ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!