ಕಾಡುಪ್ರಾಣಿಗಳ ಜೊತೆ ಸೆಲ್ಫಿಗೆ ಗುಜರಾತ್ ಅರಣ್ಯ ಇಲಾಖೆ ನಕಾರ
ಪ್ರವಾಸಿಗರು ಕಾಡುಪ್ರಾಣಿಗಳ ಜೊತೆ ಸೆಲ್ಪಿ ತೆಗೆದುಕೊಳ್ಳುವ ಹುಚ್ಚು ಸಾಹಸ ಮಾಡದಿರಿ ಎಂದು ಗುಜರಾತ್ ಅರಣ್ಯ ಇಲಾಖೆ ಸೂಚಿಸಿದೆ...
ಅಹಮದಾಬಾದ್: ಪ್ರವಾಸಿಗರು ಕಾಡುಪ್ರಾಣಿಗಳ ಜೊತೆ ಸೆಲ್ಪಿ ತೆಗೆದುಕೊಳ್ಳುವ ಹುಚ್ಚು ಸಾಹಸ ಮಾಡದಿರಿ ಎಂದು ಗುಜರಾತ್ ಅರಣ್ಯ ಇಲಾಖೆ ಸೂಚಿಸಿದೆ.
ಅತ್ಯಂತ ಅಪಾಯಕಾರಿ ಪ್ರಾಣಿಯಾದ ಸಿಂಹದ ಜತೆ ಸೆಲ್ಪಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಭರಾಟೆಯಲ್ಲಿ ನಿಮ್ಮ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆಯಿದೆ ಎಂದು ಗುಜರಾತ್ನ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೆಲ್ಪಿ ಸಾವುಗಳನ್ನು ಗಮನದಲ್ಲಿಟ್ಟುಕೊಂಡು ಪ್ರವಾಸಿಗರಿಗೆ ಗುಜರಾತ್ ಅರಣ್ಯ ಇಲಾಖೆ ಕಿವಿಮಾತು ಹೇಳಿದೆ. ಒಂದು ವೇಳೆ ಈ ರೀತಿಯ ಕೆಲಸ ಮಾಡುವುದು ಕಂಡು ಬಂದರೆ ವನ್ಯಜೀವಿ ಕಾಯ್ದೆ 1972 ರ ಅನ್ವಯ ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದೆ.
ಗುಜರಾತ್ನ ಗಿರ್ ಅರಣ್ಯ ಪ್ರದೇಶದಲ್ಲಿ ಸಿಂಹಗಳ ಸಂತತಿಯಲ್ಲಿ ಗಣನೀಯ ಏರಿಕೆ ಕಂಡಿದ್ದು, ಸೆಲ್ಪಿ ಗೀಳಿನಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವ ನಿದರ್ಶನಗಳಿವೆ ಹಾಗಾಗಿ ಗುಜರಾತ್ನಲ್ಲಿ ಈ ರೀತಿಯ ಆದೇಶ ಹೊರಡಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.