ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ 
ದೇಶ

ಶಿಕ್ಷಕರಿಗಾಗಿ ವಿವಿ ಸ್ಥಾಪನೆ: ಮಾನವ ಸಂಪನ್ಮೂಲ ಸಚಿವಾಲಯ ಚಿಂತನೆ

ಶಾಲಾ ಮಟ್ಟದಿಂದ ಕಾಲೇಜುವರೆಗೆ ಶಿಕ್ಷಣದಲ್ಲಿ ಗುಣಮಟ್ಟ ಕಾಪಾಡಲು ಶಿಕ್ಷಕರ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಸ್ಥಾಪಿಸಲು...

ನವದೆಹಲಿ: ಶಾಲಾ ಮಟ್ಟದಿಂದ ಕಾಲೇಜುವರೆಗೆ ಶಿಕ್ಷಣದಲ್ಲಿ ಗುಣಮಟ್ಟ ಕಾಪಾಡಲು ಶಿಕ್ಷಕರ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಸ್ಥಾಪಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸಾಧ್ಯತೆಗಳನ್ನು ಅನ್ವೇಷಿಸುತ್ತಿದೆ.

ಈ ನಿಟ್ಟಿನಲ್ಲಿ ಸಚಿವಾಲಯದ ಮಾರ್ಗದರ್ಶನದಂತೆ ಶಿಕ್ಷಕರ ವಿಶ್ವವಿದ್ಯಾಲಯ ಸ್ಥಾಪಿಸಲು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್ ಸಿಇಆರ್ ಟಿ) ಪರಿಕಲ್ಪನೆ ಟಿಪ್ಪಣಿಯನ್ನು ತಯಾರಿಸುತ್ತಿದೆ ಎಂದು ಹಿರಿಯ ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಶಿಕ್ಷಕರಿಗಾಗಿ ವಿಶ್ವವಿದ್ಯಾಲಯಗಳು ವಿದೇಶಗಳಲ್ಲಿವೆ. ನಮ್ಮ ದೇಶದಲ್ಲಿ ಕೂಡ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರೆ ಶಿಕ್ಷಕರ ಗುಣಮಟ್ಟವನ್ನು ಸುಧಾರಿಸಬಹುದು. ಈ ಸಂಬಂಧ ಎನ್ ಸಿಇಆರ್ ಟಿಯ ತಜ್ಞರ ತಂಡವೊಂದು ಕೆಲಸ ಮಾಡುತ್ತಿದ್ದು, ವಿಶ್ವವಿದ್ಯಾಲಯ ಸ್ಥಾಪನೆಯ ಅಗತ್ಯವನ್ನು  ಮತ್ತು ಯಾವ ರೀತಿ ಅವುಗಳನ್ನು ಅಸ್ಥಿತ್ವಕ್ಕೆ ತರಬಹುದು ಎಂಬ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಹೊಸ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿದೆಯೇ ಅಥವಾ ಈಗಿರುವ ಯಾವುದಾದರೊಂದು ಸಂಸ್ಥೆಯನ್ನು ವಿಶ್ವವಿದ್ಯಾಲಯವಾಗಿ ಬದಲಾಯಿಸಬಹುದೇ ಎಂದು ಪರೀಕ್ಷಿಸಲಿದೆ. ಉದಾಹರಣೆಗೆ ಈಗ ಸ್ಥಳೀಯ ಮಟ್ಟದಲ್ಲಿ ಎನ್ ಸಿಇಆರ್ ಟಿ ಇದೆ. ಇವುಗಳಲ್ಲಿ ಒಂದನ್ನು ಶಿಕ್ಷಕರ ವಿಶ್ವವಿದ್ಯಾಲಯವನ್ನಾಗಿ ಬದಲಾಯಿಸುವ ಸಾಧ್ಯತೆಯಿದೆ. ಈ ಸಾಧ್ಯತೆಗಳನ್ನು ವಿಚಾರ ಮಾಡಬೇಕಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ, ಮಾನವ ಸಂಪನ್ಮೂ ಲ ಸಚಿವಾಲಯ ಈಗಿರುವ 32 ಡಿಟಿಎಚ್ ಚಾನೆಲ್ ಗಳಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಆರಂಭಿಸಲು ಎನ್ ಸಿಇಆರ್ ಟಿಗೆ ಸೂಚಿಸಿದೆ. ಅದಿನ್ನು ಕೆಲ ತಿಂಗಳಲ್ಲಿ ಆರಂಭವಾಗಲಿದೆ.

ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಚಿವಾಲಯ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅವುಗಳಲ್ಲಿ ವಿದ್ಯಾಂಜಲಿ ಯೋಜನೆ ಒಂದಾಗಿದೆ. ಇದರಡಿ, ನಿವೃತ್ತ ರಕ್ಷಣಾ ಸಿಬ್ಬಂದಿ, ಮಹಿಳೆಯರು, ಗೃಹಿಣಿಯರು, ಶಿಕ್ಷಿತರು ಸ್ವ ಪ್ರೇರಿತವಾಗಿ  ಶಾಲೆಗಳ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!