ಉತ್ತರ ಪ್ರದೇಶದ ಚುನಾವಣಾ ಪ್ರಚಾರಕ್ಕೆ ಜೂ.13 ರಂದು ಮೋದಿಯಿಂದ ಅಧಿಕೃತ ಚಾಲನೆ 
ದೇಶ

ಉತ್ತರ ಪ್ರದೇಶದ ಚುನಾವಣಾ ಪ್ರಚಾರಕ್ಕೆ ಜೂ.13 ರಂದು ಮೋದಿಯಿಂದ ಅಧಿಕೃತ ಚಾಲನೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆ ಭರದಿಂದ ಸಾಗಿದ್ದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜೂ.12 ರಿಂದ ಪ್ರಾರಂಭವಾಗಲಿದ್ದು, ಜೂ.13 ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಅಲಹಾಬಾದ್: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆ ಭರದಿಂದ ಸಾಗಿದ್ದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜೂ.12 ರಿಂದ ಪ್ರಾರಂಭವಾಗಲಿದ್ದು, ಜೂ.13 ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಯುಪಿ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಮಿಷನ್ 265 + ಕಾರ್ಯಸೂಚಿಯನ್ನು ಸಿದ್ಧಪಡಿಸಿದ್ದು, ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಜೂ.12 ರಂದು ಅಧಿಕೃತ ಚಾಲನೆ ನೀಡಲಿದ್ದಾರೆ. ಇನ್ನು ಅಲಹಾಬಾದ್ ನಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಂಸದರುಗಳು ಭಾಗವಹಿಸಿ, ಮೋದಿ ಸರ್ಕಾರದ ಸಾಧನೆ, ರಾಜತಾಂತ್ರಿಕ ಯಶಸ್ಸು ಹಾಗೂ ಆರ್ಥಿಕ ಅಭಿವೃದ್ಧಿಯ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳುವ( ಅಳವಡಿಸಿಕೊಳ್ಳುವ) ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಅಲಹಾಬಾದ್ ಉತ್ತರ ಪ್ರದೇಶದ ರಾಜಕೀಯ ಕೇಂದ್ರವಾಗಿದ್ದು ಚುನಾವಣೆ ದೃಷ್ಟಿಯಿಂದಲೇ ಬಿಜೆಪಿ ಅಲಹಾಬಾದ್ ನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಡೆಸುತ್ತಿದ್ದು, ರಾಜಕೀಯ ಚಾಣಕ್ಷತನ ಪ್ರದರ್ಶಿಸಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಬಿಜೆಪಿ ಅಲಹಾಬಾದ್ ನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಡೆಸುತ್ತಿರುವುದರಿಂದ, ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿ ಖಂಡಿತವಾಗಿಯೂ ಮಹತ್ತರ ಬದಲಾವಣೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿದ್ಧಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.

ಇನ್ನು ಚುನಾವಣಾ ತಯಾರಿ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಸುಲ್ತಾನ್ ಪುರದ ಸಂಸದ ವರುಣ್ ಗಾಂಧಿ ಅವರ ಆಳೆತ್ತರದ ಕಟ್ ಔಟ್ ಗಳು ಅಲಹಾಬಾದ್ ಸೇರಿದಂತೆ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ರಾರಾಜಿಸುತ್ತಿದ್ದು, ಬಿಜೆಪಿ ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಸಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 265 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಗುರಿ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!