ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಕುಡ್ ಪ್ರದೇಶದಲ್ಲಿ ಸೋಮವಾರ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಾರೆ.
ಇಂದು ಉಗ್ರರು ಕಾಶ್ಮೀರ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿದ್ದರು. ಈ ವೇಳೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಸಿಆರ್ಪಿಎಫ್ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ಧಾರೆ. ಪ್ರತಿ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ ಎಂದು ಉಧಂಪುರದ ಎಸ್ಎಸ್ಪಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭೀಕರ ಗುಂಡಿನ ಕಾಳಗ ನಡೆಯುತ್ತಿದೆ. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೂ ಘಟನಾ ಸ್ಥಳದತ್ತ ಹೊರಟಿದ್ದಾರೆ ಎಂದು ಅವರು ಹೇಳಿದ್ದಾರೆ.