ಅರವಿಂದ್ ಕೇಜ್ರಿವಾಲ್ 
ದೇಶ

ಪ್ರಧಾನಿಗೆ ಆಪ್ ಬಗ್ಗೆ ಭೀತಿ: ಸ೦ಸದೀಯ ಕಾರ್ಯದರ್ಶಿ ಮಸೂದೆ ತಿರಸ್ಕಾರದ ನಂತರ ಕೇಜ್ರಿ ಟ್ವೀಟ್

"ಸ೦ಸದೀಯ ಕಾರ್ಯದಶಿ೯ ಮಸೂದೆ"ಗೆ ಅನುಮೋದನೆ ನೀಡುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ನವದೆಹಲಿ: ಲಾಭದಾಯಕ ಹುದ್ದೆ ಪ್ರಕರಣದಲ್ಲಿ ಸಿಲುಕಿ ಅನಹ೯ತೆ ಭೀತಿ ಎದುರಿಸುತ್ತಿದ್ದ ಆಪ್ ಶಾಸಕರ ರಕ್ಷಣೆಗೆ ಸಿದ್ಧಪಡಿಸಲಾಗಿದೆ ಎಂದು ಆರೋಪಿಸಲಾಗಿದ್ದ ದೆಹಲಿ ಸರ್ಕಾರದ  "ಸ೦ಸದೀಯ ಕಾರ್ಯದಶಿ೯ ಮಸೂದೆ"ಗೆ ಅನುಮೋದನೆ ನೀಡುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ದೆಹಲಿಯಲ್ಲಿ ಒಬ್ಬ ಶಾಸಕನನ್ನು ವಿದ್ಯುತ್ ಗೆ ಸಂಬಂಧಿಸಿದ ಕ್ಷೇತ್ರದ ಬಗ್ಗೆ ಗಮನ ಹರಿಸುವಂತೆ, ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಗಮನ ಹರಿಸಲು ಓರ್ವ ಶಾಸಕನನ್ನು, ಶಾಲೆ, ಆಸ್ಪತ್ರೆಗಳಿಗೆ ಸಂಬಂಧಿಸಿದ ವಿಷಯಗಳತ್ತ ಗಮನ ಹರಿಸಲು ಒಬ್ಬೊಬ್ಬ ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ದೆಹಲಿ ಸರ್ಕಾರದ ಒಳ್ಳೆಯ ಕೆಲಸಗಳನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಉಂಟಾಗಿದ್ದು ನಾನೂ ಕೆಲಸ ಮಾಡುವುದಿಲ್ಲ, ಬೇರೆಯವರಿಗೆ ಮಾಡುವುದಕ್ಕೂ ಬಿಡುವುದಿಲ್ಲ ಎಂದು ಕೇಜ್ರಿವಾಲ್ ಮೋದಿ ವಿರುದ್ಧ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಂಸದೀಯ ಕಾರ್ಯದರ್ಶಿ ಮಸೂದೆಯ ಪ್ರಕಾರ ನೆಮಕವಾಗುತ್ತಿದ್ದ 21 ಸಂಸದೀಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಲಿದ್ದ ಶಾಸಕರುಗಳಿಗೆ ಯಾವುದೇ ರೀತಿಯ ಸಂಭಾವನೆ, ಮನೆ, ವಾಹನ ನೀಡಲಾಗುತ್ತಿರಲಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳಿಂದ ಆತಂಕಕ್ಕೊಳಗಾಗಿರುವ ಪ್ರಧಾನಿ ನರೇಂದ್ರ ಮೋದಿ ತಾವೂ ಕೆಲಸ ಮಾಡುವುದಿಲ್ಲ, ಮಾಡುವವರಿಗೂ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಸಿಎಂ ವ್ಯಂಗ್ಯವಾಡಿದ್ದಾರೆ.

ಸಂಸದೀಯ ಕಾರ್ಯದರ್ಶಿ ಸ್ಥಾನವನ್ನು ಲಾಭದಾಯಕ ಹುದ್ದೆಯಿಂದ ಹೊರಗಿಡುವ ದೆಹಲಿ ಸರ್ಕಾರದ ಮಸೂದೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಿರಸ್ಕರಿಸಿದ್ದು, ಸಿಎಂ ಅರವಿಂದ್  ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾಗಿದೆ. ದೆಹಲಿ ಸಕಾ೯ರ ರೂಪಿಸಿರುವ "ಸ೦ಸದೀಯ ಕಾರ್ಯದಶಿ೯ ಮಸೂದೆ'ಯನ್ನು ರಾಷ್ಟ್ರಪತಿ ಪ್ರಣಬ್ ಮುಖಜಿ೯ ಸೋಮವಾರ ತಿರಸ್ಕರಿಸಿದ್ದು,  ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ