ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಉತ್ತರ ಪ್ರದೇಶದ ಆರು ಕಾಂಗ್ರೆಸ್ ಶಾಸಕರನ್ನು ಮಂಗಳವಾರ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಕಪಿಲ್ ಸಿಬಲ್ ವಿರುದ್ಧ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರನ್ನು ಉಚ್ಚಾಟಿಸಲಾಗಿದೆ ಎಂದು ಪಕ್ಷದ ನಾಯಕ ಜನಾರ್ದನ ದ್ವಿವೇದಿ ಅವರು ಹೇಳಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟು ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಮೈತ್ರಿಕೂಟ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.